ಕನಕಗಿರಿ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎಸ್‌ಐಆರ್ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿದರು. ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ಣ ಕಟ್ಟಿಮನಿ ಇತರರಿದ್ದರು.
- ಅಧಿಕಾರಿಗಳಿಗೆ ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಸೂಚನೆ
- ಪಂಚಾಯತ್ ರಾಜ್ ಸಭೆ
ಕನಕಗಿರಿ: ಜೂನ್ ಕೊನೇ ವಾರ ಆರಂಭವಾಗುವ ಎಸ್‌ಐಆರ್ ಪ್ರಕ್ರಿಯೆಗೆ ನೇಮಕಗೊಂಡ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್‌ಐಆರ್ ಪ್ರಕ್ರಿಯೆ ಕುರಿತ ಕಂದಾಯ, ಪಂಚಾಯತ್ ರಾಜ್ ಸಭೆಯಲ್ಲಿ ಮಾತನಾಡಿದರು. ಜೂ.20ರಿಂದ ಆರಂಭವಾಗುವ ಎಸ್‌ಐಆರ್ ಪ್ರಕ್ರಿಯೆಗೆ ಮೊದಲ 3 ದಿನಗಳ ಕಾಲ ತರಬೇತಿ ನೀಡಲಾಗುತ್ತಿದ್ದು, ಜೂ.30ರಿಂದ ಜು.29ರವರೆಗೆ ಮನೆ ಮನೆ ಭೇಟಿ ನಡೆಯಲಿದೆ. ನಂತರ ಹಂತ ಹಂತವಾಗಿ ಅಕ್ಟೋಬರ್‌ವರೆಗೆ ಮುಂದಿನ ಪ್ರಕ್ರಿಯೆ ನಡೆಯಲಿವೆ. ನಿಯೋಜನೆಗೊಂಡ ಸಿಬ್ಬಂದಿ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು ಎಂದರು.
ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ಣ ಕಟ್ಟಿಮನಿ, ಪಿಡಿಒಗಳಾದ ನಾಗೇಶ, ಕನಕಪ್ಪ, ಅಮರೇಶ, ಲಕ್ಷ್ಮಣ ನಾಯಕ ಇತರರಿದ್ದರು.