ಯಲಬುರ್ಗಾದ ಕಂದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಪ್ರಕಾಶ ನಾಶಿ ಮಾತನಾಡಿದರು. ಭೋವಿ ಸಮಾಜದ ತಾಲೂಕು ಅಧ್ಯಕ್ಷ ದುರಗಪ್ಪ ಕರಮುಡಿ, ತಾಪಂ ಮಾಜಿ ಸದಸ್ಯ ನಾಗಪ್ಪ ವಡ್ಡರ್ ಇತರರಿದ್ದರು. 
ಕೊಪ್ಪಳ

ಜಯಂತಿ ಅರ್ಥಪೂರ್ಣವಾಗಿ ಆಚರಣೆ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಆಚರಣೆ
  • ಶಿವಯೋಗಿ ಸಿದ್ದರಾಮೇಶ್ವರ

ಜಯಂತಿ ಅರ್ಥಪೂರ್ಣವಾಗಿ ಆಚರಣೆ

ಯಲಬುರ್ಗಾ: ಶಿವಶರಣ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ತಾಲೂಕಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಪ್ರಕಾಶ ನಾಶಿ ಹೇಳಿದರು.
ಪಟ್ಟಣದ ಕಂದಾಯ ಭವನದಲ್ಲಿ ತಾಲೂಕಾಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜ.14ರಂದು ತಾಲೂಕಿನ ಎಲ್ಲ ಸರ್ಕಾರಿ ಶಾಲಾ- ಕಾಲೇಜು ಹಾಗೂ ಸರ್ಕಾರಿ ಕಚೇೀರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು. ಸಮಾಜದಿಂದ ಜ.22ರಂದು ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು.
ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ ವೃತ್ತಕ್ಕೆ ಮಾಲಾರ್ಪಣೆ ಮಾಡಿ, ಕುಂಭ, ಕಳಸ ಹಾಗೂ ಜನಪದ ವಾದ್ಯಮೇಳದೊಂದಿಗೆ ಭಾವಚಿತ್ರ ಮೆರವಣಿಗೆ ನಂತರ ಕಾರ್ಯಕ್ರಮ ಆರಂಭಿಸಲಾಗುವುದು. ನಂತರ ವಿಶೇಷ ಉಪನ್ಯಾಸ ನಡೆಯಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಭೋವಿ ಸಮಾಜದ ತಾಲೂಕು ಅಧ್ಯಕ್ಷ ದುರಗಪ್ಪ ಕರಮುಡಿ, ತಾಪಂ ಮಾಜಿ ಸದಸ್ಯ ನಾಗಪ್ಪ ವಡ್ಡರ್ ಇತರರಿದ್ದರು.