ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಟಕದ ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಶಿವಲೀಲಾ ವನ್ನೂರು ವಾತನಾಡಿದರು.  
ಕೊಪ್ಪಳ

ಲೈಂಗಿಕ ಹಲ್ಲೆಗೆ ಅಜೀವ ಜೈಲು ಶಿಕ್ಷೆ

ಕುರುವತ್ತಿ ಶ್ರೀಕಾಂತಪ್ಪ

ಪ್ರಮುಖ ಮುಖ್ಯಾಂಶಗಳು

  • ಶಿವಲೀಲಾ ವನ್ನೂರು ಎಚ್ಚರಿಕೆ
  • ಮಕ್ಕಳ ಸುರಕ್ಷತೆ ಜಾಗೃತಿ ಕಾರ್ಯಕ್ರಮ
ಕೊಪ್ಪಳ: ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದು, 18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ಹಲ್ಲೆ ನಡೆಸುವವರಿಗೆ ಕನಿಷ್ಠ 20 ವರ್ಷ ಅಥವಾ ಆಜೀವ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಟಕದ ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಶಿವಲೀಲಾ ವನ್ನೂರು ತಿಳಿಸಿದರು.
ಜಿಲ್ಲೆಯ ಕನಕಗಿರಿಯಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗಾಗಿ ಬುಧವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಜಾಗೃತಿ ಕಾರ್ಯಕ್ರಮದಲ್ಲಿ ವಾತನಾಡಿದರು.
ಪೋಕ್ಸೋ ಕಾಯ್ದೆ 2012ರ ಅನ್ವಯ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯಿದೆ. ಮಕ್ಕಳಿಗೆ ಶಾಬ್ದಿಕ, ದೈಹಿಕ ಅಥವಾ ಲಿಖಿತವಾಗಿ ಅವರ ನತೆಗೆ ಧಕ್ಕೆ ತರುವಂತಹ ಯಾವುದೇ ಕೃತ್ಯವೆಸಗಿದರೂ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು. ಇಂತಹ ಕೃತ್ಯಗಳಿಗೆ ಸಹಾಯ ಅಥವಾ ಪ್ರೋತ್ಸಾಹ ನೀಡುವವರಿಗೂ ಸವಾನ ಶಿಕ್ಷೆ ಅನ್ವಯವಾಗುತ್ತದೆ ಎಂದು ವಿವರಿಸಿದರು.
ಇಂಟರ್‌ನೆಟ್ ಪ್ರಭಾವದಿಂದ ಮಕ್ಕಳು ಹಾದಿ ತಪ್ಪುತ್ತಿರುವುದು ಮತ್ತು ಬಾಲ್ಯವಿವಾಹದಂತಹ ಪಿಡುಗುಗಳು ಹೆಚ್ಚುತ್ತಿವೆ. ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾಗಿರುವ ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ ರೆಡ್ಡಿ ವಾತನಾಡಿ, ಮಗು ಬೇಡವಾದರೆ ಅದನ್ನು ಎಲ್ಲೆಂದರಲ್ಲಿ ಎಸೆಯುವ ಬದಲು 1098 ಸಹಾಯವಾಣಿ ಅಥವಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಬೇಕು. ನಿಯಮಬಾಹಿರವಾಗಿ ದತ್ತು ಪಡೆಯುವುದು ಅಥವಾ ನೀಡುವುದು ಅಪರಾಧವಾಗಿದ್ದು, ಕಾನೂನುಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಪ್ರತಿಭಾ ಕಾಶಿಮಠ, ರವಿಕುವಾರ ಪವಾರ ಹಾಗೂ ಕನಕಗಿರಿ ತಾಲೂಕಿನ ಎಲ್ಲ ಆಶಾ ಕಾರ್ಯಕರ್ತೆಯರು ಇದ್ದರು.