ಗಂಗಾವತಿ ಮೇದಾರ್ ಓಣಿಯ ಶ್ರೀಲಕ್ಷ್ಮಿವೆಂಕಟೇಶ್ವರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಯಿತು. ಸಂಘದ ಸಂಸ್ಥಾಪಕ ಅಧ್ಯಕ್ಷ ರುದ್ರಪ್ಪ ಹಣವಾಳ್, ಪ್ರಧಾನ ಕಾರ್ಯದರ್ಶಿ ಸಾಗರ್ ಎಲ್ಲೂರು, ಪದಾಧಿಕಾರಿಗಳಾದ ಶರಣಪ್ಪ ಚೌಡಾಪುರ, ಮಹೆಬೂಬ್, ಮಹೇಶ,ನಿಂಗರಾಜ ಇತರರಿದ್ದರು.
- ಸಂಘದ ಸಂಸ್ಥಾಪಕ ಅಧ್ಯಕ್ಷ ರುದ್ರಪ್ಪ ಹಣವಾಳ್ ಆಗ್ರಹ
ಗಂಗಾವತಿ: ನಗರದ ಮೇದಾರ್ ಓಣಿಯ ಶ್ರೀಲಕ್ಷ್ಮಿವೆಂಕಟೇಶ್ವರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯಿಂದ ಸುರಕ್ಷತಾ ಕಿಟ್‌ಗಳನ್ನು ಬುಧವಾರ ವಿತರಿಸಲಾಯಿತು.
ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುರಕ್ಷತಾ ಅಭಿಯಾನದ ವಿಶೇಷ ಸಭೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿದ್ದು, ಕಾರ್ಮಿಕ ಇಲಾಖೆ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ರುದ್ರಪ್ಪ ಹಣವಾಳ್ ಮಾತನಾಡಿ, ಕಾರ್ಮಿಕ ಇಲಾಖೆ ಕಳಪೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಿದೆ. ಯೋಜನೆ ಅನುಷ್ಠಾನದಲ್ಲಿ ವಿಳಂಭವಾಗುತ್ತಿದ್ದು, ಅರ್ಜಿ ಭರ್ತಿ ನೆಪದಲ್ಲಿ ಕಾರ್ಮಿಕರ ಅರ್ಜಿಗಳನ್ನು ವಿನಾಕಾರಣ ತಿರಸ್ಕರಿಸಲಾಗುತ್ತಿದೆ. ಕಾರ್ಮಿಕರು ಬಹುತೇಕರು ಅನಕ್ಷರಸ್ಥರಾಗಿದ್ದು, ಅರ್ಜಿ ಭರ್ತಿಯಲ್ಲಿ ಲೋಪಗಳಿದ್ದರೆ ಇಲಾಖೆ ಸಿಬ್ಬಂದಿ ಸರಿಪಡಿಸಿಕೊಳ್ಳಬೇಕು. ಕಾರ್ಮಿಕರ ಸಹಾಯ ಮತ್ತು ಪರಿಹಾರಧನದ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದರು. ಕಾರ್ಮಿಕ ಇಲಾಖೆ ನೀಡಿರುವ ಐಡಿ ಕಾರ್ಡ್‌ಗಳನ್ನು ವಿತರಿಸಲಾಯಿತು.