ಯಲಬುರ್ಗಾದಲ್ಲಿ ಬಿಜೆಪಿ ಮಹಿಳಾ ಘಟಕದಿಂದ ತಹಸೀಲ್ದಾರ್ ಪ್ರಕಾಶ ನಾಶಿಗೆ ಮನವಿ ಸಲ್ಲಿಸಲಾಯಿತು. ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಸಂತೋಷಿಮಾ ಜೋಶಿ, ಅಮರೇಶ ಹುಬ್ಬಳ್ಳಿ ಇತರರಿದ್ದರು.
- ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಆಕ್ರೋಶ
- ಯಲಬುರ್ಗಾ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಯಲಬುರ್ಗಾ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪದೇ ಪದೆ ಟೀಕಿಸಿ ಅವಮಾನಿಸುತ್ತಿರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದವರ ನಡೆ ಖಂಡಿಸಿ ಪಟ್ಟಣದಲ್ಲಿ ಗುರುವಾರ ಬಿಜೆಪಿ ಮಂಡಲ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಪ್ರಕಾಶ ನಾಶಿಗೆ ಮನವಿ ಸಲ್ಲಿಸಲಾಯಿತು.
ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಇತ್ತೀಚೆಗೆ ಕರ್ನಾಟಕ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಿ ‘ದೇಶದ ಸಂಸತ್ತಿಗೆ ಬರಲು ಧೈರ್ಯವಿಲ್ಲದವರು ದೇಶವನ್ನು ಹೇಗೆ ರಕ್ಷಿಸುತ್ತಾರೆ‘ ಎಂಬ ಬ್ಯಾನರ್ ವಿಧಾನ ಸೌಧದ ಮುಂದೆ ಅಳವಡಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಜಾಗತಿಕವಾಗಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ತರಲು ಶ್ರಮಿಸುತ್ತಿರುವ ಮತ್ತು ಆಪರೇಷನ್ ಸಿಂಧೂರ್‌ದಂತಹ ಐತಿಹಾಸಿಕ ಕಾರ್ಯಾಚರಣೆ ನಿರ್ಧಾರ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವಮಾನಿಸುತ್ತಿರುವ ಕಾಂಗ್ರೆಸ್ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಸಂತೋಷಿಮಾ ಜೋಶಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅವಮಾನಿಸುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮುಂದುರಿಸಿದರೆ ಮಹಿಳಾ ಮೋರ್ಚಾದಿಂದ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಬಿಜೆಪಿ ಮಾಜಿ ಜಿಲ್ಲಾ ಉಪಾಧ್ಯಕ್ಷ ಬಸವಲಿಂಗಪ್ಪ ಭೂತೆ ಮಾತನಾಡಿ, ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಕಳೆದ ಲೋಕಸಭೆ ಅಧಿವೇಶನ ವೇಳೆ ತಮ್ಮ ಪಕ್ಷದ ಮಹಿಳಾ ಸಂಸದರ ಮೂಲಕ ಪ್ರಧಾನಮಂತ್ರಿ ಮೇಲೆ ದೈಹಿಕ ಹಲ್ಲೆ ನಡೆಸಲು ಷಡ್ಯಂತ್ರ ರೂಪಿಸಿದ್ದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ರಾಹುಲ್ ನಡೆ ಸರಿಯಲ್ಲ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಪ್ರಮುಖರಾದ ಅಮರೇಶ ಹುಬ್ಬಳ್ಳಿ, ಬಸವರಾಜ ಗುಳಗುಳಿ, ಬಸವರಾಜ ಹಾಳಕೇರಿ, ಕರಿಬಸಯ್ಯ ಬಿನ್ನಾಳ, ಸಂಗಪ್ಪ ಜೋಗಣ್ಣನವರ, ದೊಡ್ಡಯ್ಯ ಗುರುವಿನ, ಕಲ್ಲಪ್ಪ ಕರಮುಡಿ, ಅಶೋಕ ಅರಕೇರಿ, ವಸಂತ್ ಬಾವಿಮನಿ, ಈರಪ್ಪ ಬಣಕಾರ, ಶಂಕರ ಬಾವಿಮನಿ, ಕಳಕಪ್ಪ ತಳವಾರ, ಬಾಪುಗೌಡ ಪಾಟೀಲ, ಜಗದೀಶ ಸೂಡಿ, ಗೌತಮ ಜೋಶಿ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಇದ್ದರು.