- ಕನ್ನಡ-ಸಂಸತಿ ಸಹಾಯಕ ನಿರ್ದೇಶಕ ಕರ್ಣಕುಮಾರ್ ಹೇಳಿಕೆ
ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಸಾಂಸತಿಕ ನಾಯಕ ಶ್ರೀ ಬಸವೇಶ್ವರ ಜಯಂತಿಯನ್ನು ಏಪ್ರಿಲ್ 20 ರಂದು ಸಂಜೆ 6 ಗಂಟೆಗೆ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಘನ ಉಪಸ್ಥಿತಿಯಲ್ಲಿ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರು, ಶಾಸಕರು, ವಿಪ ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ ಭಾಗವಹಿಸುವವರು. ಹಾರೋಗೇರಿ ಶರಣ ಚಿಂತಕರು ಹಾಗೂ ಹಿರಿಯ ಸಾಹಿತಿ ವಿ.ಎಸ್. ಮಾಳಿ ಮತ್ತು ಬೆಳಗಾವಿಯ ಬಸವ ಚಿಂತಕರಾದ ಡಾ. ದಾನಮ್ಮ ಝಳಕಿ ಅವರು ಶ್ರೀ ಬಸವೇಶ್ವರರ ಕುರಿತು ವಿಶೇಷ ಉಪನ್ಯಾಸ ನೀಡುವರು. ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ತಿಳಿಸಿದ್ದಾರೆ.