ಕೊಪ್ಪಳದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿದ್ದ 3 ದಿನಗಳ ಸರಸ್ ಮೇಳ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಉದ್ಘಾಟಿಸಿದರು. ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶ ಟಿ.ಕೃಷ್ಣಮೂರ್ತಿ, ಜಿಲ್ಲಾ ಕೌಶಲ ಮಿಷಿನ್‌ವ್ಯವಸ್ಥಾಪಕರು, ಎನ್.ಆರ್.ಎಲ್.ಎಂ ಮತ್ತು ನಲ್ಮ್ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.
- ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ಅಭಿಪ್ರಾಯ
- ಸ್ವಾವಲಂಬಿ ಬದುಕಿಗಾಗಿ ಸರಸ್ ಮೇಳ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕೊಪ್ಪಳ: ಮಹಿಳೆಯರು ಆರ್ಥಿಕ ಸಬಲರಾದರೆ ಸವಾಜದ ಅಭಿವದ್ಧಿ ಸಾಧ್ಯ. ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ನೇರ ವಾರುಕಟ್ಟೆ ಒದಗಿಸುವ ಮೂಲಕ ಸರಸ್ ಮೇಳ ಅವರ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿಯಾಗಲಿದೆ ಎಂದು ಡಿಸಿ ಡಾ.ಸುರೇಶ್ ಬಿ.ಇಟ್ನಾಳ್ ಹೇಳಿದರು.
ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ 3ದಿನಗಳ ಸರಸ್ ಮೇಳ ಕಾರ್ಯಕ್ರಮದಲ್ಲಿ ವಾತನಾಡಿದರು. ಗ್ರಾಮೀಣ ಮತ್ತು ನಗರದ ಮಹಿಳಾ ಸಂಗಳು ತಯಾರಿಸುವ ವಿಶಿಷ್ಟ ಉತ್ಪನ್ನಗಳು ವಾರುಕಟ್ಟೆಯ ಕೊರತೆಯಿಂದ ಹಿನ್ನಡೆ ಅನುಭವಿಸುತ್ತಿವೆ. ಇದನ್ನು ಗಮನಿಸಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಮಹಿಳೆಯರ ಉದ್ಯಮಶೀಲತೆಗೆ ಉತ್ತೇಜನ ನೀಡುವುದು ಮತ್ತು ಸಾರ್ವಜನಿಕರಿಗೆ ನೇರವಾಗಿ ಗುಣಮಟ್ಟದ ವಸ್ತುಗಳನ್ನು ತಲುಪಿಸುವುದು ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ವೈವಿಧ್ಯಮಯ ಮಳಿಗೆಗಳು: ಮೇಳದಲ್ಲಿ 30 ಮಳಿಗೆಗಳಲ್ಲಿ ಕರಕುಶಲ ವಸ್ತುಗಳಿಂದ ಸಾವಯವ ಆಹಾರ ಪದಾರ್ಥಗಳವರೆಗೆ ವೈವಿಧ್ಯಮಯ ವಸ್ತುಗಳ ಸಂಗ್ರಹವಿದೆ. ವಿಶೇಷವಾಗಿ ಕಿನ್ನಾಳ ಗೊಂಬೆಗಳು, ಲವಾಣಿ ಉಡುಗೆಗಳು, ಬಿದಿರಿನ ಬುಟ್ಟಿಗಳು, ಸಾವಯವ ಉತ್ಪನ್ನಗಳು, ಬಾಳೆ ನಾರಿನ ಕಲಾಕೃತಿಗಳು ಹಾಗೂ ಸಿರಿಧಾನ್ಯದ ಉತ್ಪನ್ನಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಸಾರ್ವಜನಿಕರು ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿದರು. ಸ್ವಸಹಾಯ ಗುಂಪಿನ ಮಹಿಳೆಯರಿಗೆ ಉತ್ತಮ ಆದಾಯ ಗಳಿಸಲು ಮೇಳ ಸಹಕಾರಿಯಾಗಿದ್ದು, ಉತ್ಪನ್ನಗಳಿಗೆ ವಾರುಕಟ್ಟೆ ಜತೆಗೆ ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದೆ.
ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ಕೌಶಲ ಮಿಷಿನ್‌ವ್ಯವಸ್ಥಾಪಕರು, ಎನ್.ಆರ್.ಎಲ್.ಎಂ ಮತ್ತು ನಲ್ಮ್ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳಿದ್ದರು.