ಗಂಗಾವತಿ ತಾಲೂಕಿನ ವೆಂಕಟಗಿರಿ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಯೋಜನೆ ಮಾಹಿತಿ ಪತ್ರವನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಮಂಗಳವಾರ ಬಿಡುಗಡೆಗೊಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಸಿ.ಆರ್.ಅಭಿಲಾಷಾ, ಎಪಿಎಂಸಿ ಮಾಜಿ ಅಧ್ಯಕ್ಷ ಅಮರೇಗೌಡ ಪೊ.ಪಾಟೀಲ್, ನಗರಸಭೆ ಮಾಜಿ ಸದಸ್ಯ ಮನೋಹರಗೌಡ ಹೇರೂರು, ಪ್ರಮುಖರಾದ ಆನಂದಗೌಡ, ಚನ್ನವೀರನಗೌಡ ಆರಾಳ್ ಇತರರಿದ್ದರು. 
ಕೊಪ್ಪಳ

ಕೃಷಿ ಯೋಜನೆ ಸಮರ್ಪಕ ಅನುಷ್ಠಾನವಾಗಲಿ

ಕುರುವತ್ತಿ ಶ್ರೀಕಾಂತಪ್ಪ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಗಾಲಿ ಜನಾರ್ದನರೆಡ್ಡಿ ಸೂಚನೆ
  • ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ
ಗಂಗಾವತಿ: ಸರ್ಕಾರದಿಂದ ದೊರೆಯುವ ಕೃಷಿ ಯೋಜನೆಗಳನ್ನು ಸಕಾಲಕ್ಕೆ ರೈತರಿಗೆ ಒದಗಿಸಬೇಕಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆವಹಿಸುವಂತೆ ಶಾಸಕ ಗಾಲಿ ಜನಾರ್ದನರೆಡ್ಡಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ವೆಂಕಟಗಿರಿ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರ ಬೇಡಿಕೆ ಅನುಗುಣ ಕೃಷಿ ಪೂರಕ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಕೃಷಿ ಅಧಿಕಾರಿಗಳು ಸಂಚರಿಸಿ ಮಣ್ಣಿನ ಲವತ್ತತೆ ಆಧಾರಿತ ಕೃಷಿ ಚಟುವಟಿಕೆ ಹಮ್ಮಿಕೊಳ್ಳುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ವಿಳಂಬಕ್ಕೆ ಅವಕಾಶ ನೀಡದೇ ತಕ್ಷಣ ಸ್ಪಂದಿಸಬೇಕು. ಗ್ರಾಮಾಭಿವೃದ್ಧಿ ಪೂರಕ ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿದ್ದು, ಹಂತಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಯೋಜನೆಗಳ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಹಾಯಕ ಕೃಷಿ ನಿರ್ದೇಶಕ ಸಿ.ಆರ್. ಅಭಿಲಾಷಾ, ಎಪಿಎಂಸಿ ಮಾಜಿ ಅಧ್ಯಕ್ಷ ಅಮರೇಗೌಡ ಪೊ.ಪಾಟೀಲ್, ನಗರಸಭೆ ಮಾಜಿ ಸದಸ್ಯ ಮನೋಹರಗೌಡ ಹೇರೂರು, ಪ್ರಮುಖರಾದ ಆನಂದಗೌಡ, ಚನ್ನವೀರನಗೌಡ ಆರಾಳ್ ಸೇರಿ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಗಳಿದ್ದರು.