ಯಲಬುರ್ಗಾ ತಾಲೂಕಿನ ಕಲಭಾವಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ತಾಪಂ ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಐಇಸಿ ಸಂಯೋಜಕ, ಪಿಡಿಒ ರಾಮಣ್ಣ, ಸಿಬ್ಬಂದಿ ಇದ್ದರು. 
ಕೊಪ್ಪಳ

ಹೂಳೆತ್ತುವ ಕಾಮಗಾರಿ ಅಭಿವೃದ್ಧಿಗೆ ಪೂರಕ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಸಲಹೆ
  • ಯೋಜನೆ ಅನುಷ್ಠಾನದ ಕುರಿತು ಮಾಹಿತಿ
ಯಲಬುರ್ಗಾ: ತಾಲೂಕಿನ ತಾಳಕೇರಿ ಗ್ರಾಪಂ ವ್ಯಾಪ್ತಿಯ ಕಲಭಾವಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಶನಿವಾರ ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿ ಪ್ರಗತಿ, ಕೂಲಿಕಾರರ ಹಾಜರಾತಿ ಹಾಗೂ ಯೋಜನೆ ಅನುಷ್ಠಾನದ ಕುರಿತು ಮಾಹಿತಿ ಪಡೆದು ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ಆರ್ಥಿಕ ಭದ್ರತೆ ಒದಗಿಸುವ ಮಹತ್ವದ ಕಾರ್ಯಕ್ರಮವಾಗಿದೆ. ನರೇಗಾ ಯೋಜನೆಯಡಿ ಸತತ 2 ತಿಂಗಳ ಕಾಲ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದ್ದು, ಗರಿಷ್ಠ ಪ್ರಮಾಣದಲ್ಲಿ ಮಾನವ ದಿನಗಳನ್ನು ಸೃಜಿಸಿ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಬೇಕು ಎಂದರು.
ಅಳತೆಗೆ ಅನುಗುಣವಾಗಿ ಕೂಲಿ ನೀಡಲಾಗುತ್ತಿದ್ದು, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಸಮಾನ ವೇತನ ನೀಡಲಾಗುತ್ತಿದೆ. ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಗ್ರಾಪಂಗಳು ಮಹಿಳಾ ಸ್ನೇಹಿ ವಾತಾವರಣ ನಿರ್ಮಿಸಿ ಸಬಲೀಕರಣಕ್ಕೆ ಶ್ರಮಿಸುತ್ತಿವೆ.
ನಾಲಾ ಹೂಳೆತ್ತುವ ಕಾಮಗಾರಿಯಿಂದ ಮಳೆನೀರಿನ ಸಂಗ್ರಹಣೆ ಹೆಚ್ಚಲಿದೆ. ಜತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇಂಥ ಕಾಮಗಾರಿಗಳು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿದ್ದು, ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ತಾಪಂ ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಐಇಸಿ ಸಂಯೋಜಕ, ಪಿಡಿಒ ರಾಮಣ್ಣ, ಸಿಬ್ಬಂದಿ ಇದ್ದರು.