ಅಳವಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಗರ್ಭಿಣಿಯರ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಡಿವೈಡಿಎಚ್‌ಇಒ ದೇವಮ್ಮ ಮಾತನಾಡಿದರು. ಡಾ.ಜಾಫರ್, ಡಾ.ಚಂದ್ರಶೇಖರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಬಿಎಚ್‌ಸಿಒ ಸಾವಿತ್ರಿ ಹಂಚಿನಾಳ ಇತರರಿದ್ದರು.
- ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ದೇವಮ್ಮ ಸಲಹೆ
- ಗರ್ಭಿಣಿಯರ ಆರೋಗ್ಯ ಉಚಿತ ತಪಾಸಣಾ ಶಿಬಿರ
ಅಳವಂಡಿ: ಗರ್ಭಿಣಿಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸುರಕ್ಷಿತ ಹೆರಿಗೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ದೇವಮ್ಮ ಹೇಳಿದರು.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗರ್ಭಿಣಿಯರ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಗರ್ಭಾವಸ್ಥೆಯಲ್ಲಿ ಪೌಷ್ಟಿಕ ಆಹಾರ ಸೇವನೆ ಮತ್ತು ವೈದ್ಯರ ಸಲಹೆಗಳನ್ನು ಚಾಚೂ ತಪ್ಪದೆ ಪಾಲಿಸುವುದು ತಾಯಿ ಹಾಗೂ ಮಗುವಿನ ಆರೋಗ್ಯದ ಸುಧಾರಣೆಗೆ ಅವಶ್ಯಕ.
ಸರ್ಕಾರದಿಂದ ಸಿಗುವ ಎಲ್ಲ ಆರೋಗ್ಯ ಸೌಲಭ್ಯಗಳನ್ನು ಗ್ರಾಮೀಣ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಿ ಎಂದರು. ಗರ್ಭಿಣಿಯರಿಗೆ ರಕ್ತದೊತ್ತಡ, ರಕ್ತಹೀನತೆ (ಹಿಮೋಗ್ಲೋಬಿನ್) ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ನಡೆಸಿ ಔಷಧಿ ಹಾಗೂ ಪೌಷ್ಟಿಕಾಂಶದ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಯಿತು.
ವೈದ್ಯರಾದ ಜಾಫರ್, ಚಂದ್ರಶೇಖರ ಮೇಟಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಬಿಎಚ್‌ಸಿಒ ಸಾವಿತ್ರಿ ಹಂಚಿನಾಳ, ಲ್ಯಾಬ್ ಟೇಕ್ನಿಷಿಯನ್ ನಾಗರಾಜ ಇತರರಿದ್ದರು.