ಅಳವಡಿ ಸಮೀಪದ ಹಿರೇಸಿಂದೋಗಿ ಗ್ರಾಮದ ಕೆ.ಪಿ.ಎಸ್. ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಲಾಯಿತು. ಪ್ರಮುಖರಾದ ಶರಣಬಸವನಗೌಡ, ಮಹಾದೇವಪ್ಪ, ಬೀರಪ್ಪ ಅಂಡಗಿ, ಹನುಮಂತಪ್ಪ ಇತರರು ಇದ್ದರು.
- ಆತ್ಮವಿಶ್ವಾಸವನ್ನು
- ಪ್ರದರ್ಶಿಸುವ
- ಅವಕಾಶ
* ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಸಲಹೆ
ಅಳವಂಡಿ: ಕಲಿಕೆ ಪ್ರಕ್ರಿಯೆ ಸಂತಸದಾಯಕವಾಗಿದ್ದಲ್ಲಿ ಕಲಿಸುವ ವಿಧಾನ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಹೇಳಿದರು.
ಸಮೀಪದ ಹಿರೇಸಿಂದೋಗಿ ಗ್ರಾಮದ ಕೆ.ಪಿ.ಎಸ್. ಶಾಲೆಯಲ್ಲಿ ಹಮ್ಮಿಕೊಂಡ ಹಿರೇಸಿಂದೋಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ಎಫ್‌ಎಲ್‌ಎನ್ ಕಲಿಕಾ ಹಬ್ಬ ಎಂಬ ವಿನೂತನ ಕಾರ್ಯಕ್ರಮ ಜಾರಿ ಮಾಡಿದೆ. ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕವಾದ ಭಿನ್ನತೆಗಳಿದ್ದು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಮತ್ತು ಸೃಜನಾತ್ಮಕ ಚಟುವಟಿಕೆ ಮಾಡುವ ಪರಿಕಲ್ಪನೆಯನ್ನು ಮೂಡಿಸುವ ಚಟುವಟಿಕೆ ಕಾರ್ಯಕ್ರಮವಾಗಿದೆ ಎಂದರು.
ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬೀರಪ್ಪ ಅಂಡಗಿ ಮಾತನಾಡಿ, ಕೊರೊನಾ ಎಂಬ ಮಹಾಮಾರಿ ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಉಂಟಾಗಿದ್ದ ಅಂತರ ಸರಿಪಡಿಸುವ ನಿಟ್ಟಿನಲ್ಲಿ ಕಲಿಕಾ ಹಬ್ಬ ಜಾರಿಗೆ ತರಲಾಯಿತು. ಈ ಕಲಿಕಾ ಹಬ್ಬದ ಮೂಲಕ ಮಕ್ಕಳು ತಮ್ಮಲ್ಲಿರುವ ಪ್ರತಿಭೆ, ಆತ್ಮವಿಶ್ವಾಸವನ್ನು ಪ್ರದರ್ಶಿಸುವ ಅವಕಾಶ ಪಡೆಯುತ್ತಾರೆ ಎಂದರು.
ವಲಯ ಶಿಕ್ಷಣ ಸಂಯೋಜಕ ಮಹಾದೇವಪ್ಪ ಗುಳೇದ, ಎಸ್‌ಡಿಎಮ್ಸಿ ಉಪಾಧ್ಯಕ್ಷ ಹನುಮಂತಪ್ಪ ಕುದರಿ, ಕ್ಷೇತ್ರ ಸಮನ್ವಯಾಧಿಕಾರಿ ಮೈಬೂಬ್ ಹುಸೇನ, ಶಿಕ್ಷಣ ಸಂಯೋಜಕ ವೀರೇಶ ಅರಳಿಕಟ್ಟಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶಿವಪ್ಪ, ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಮ್ಯಾಗಳಮನಿ, ತಾಲೂಕು ಅಧ್ಯಕ್ಷ ಮಂಜುನಾಥ ಕೆಸಲಾಪುರ, ಸಿಆರ್ ಪಿ ನಾಗರಾಜ ಸಾಲಮನಿ ಇತರರು ಇದ್ದರು.