ಕೊಪ್ಪಳದಲ್ಲಿ ಜನಪರ ಸಂಟನೆಗಳ ಒಕ್ಕೂಟದಿಂದ ಡಿಸಿ ಡಾ.ಸುರೇಶ ಬಿ.ಇಟ್ನಾಳಗೆ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ದಲಿತ ಯುವ ವೇದಿಕೆ ಜಿಲ್ಲಾ ಸಂಚಾಲಕ ಸುಂಕಪ್ಪ ಮೀಸಿ, ಪ್ರಜಾ ಶಕ್ತಿ ಕನ್ನಡಪರ ವೇದಿಕೆಯ ಜಿಲ್ಲಾ ಖಜಾಂಚಿ ಡಿ.ಮುದ್ದುರಾಜ್ ಚನ್ನದಾಸರ್ ಇದ್ದರು.
- ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಗೆ ಮನವಿ
- ಜನಪರ ಸಂಟನೆಗಳ ಒಕ್ಕೂಟದಿಂದ ಆಗ್ರಹ
ಕೊಪ್ಪಳ: ರಾಜ್ಯದಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಸೇರಿದಂತೆ ಅಪಾಯಕಾರಿ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣಾಗಿಸಿದ ವಾವು ಮತ್ತು ಇತರೆ ಹಣ್ಣುಗಳ ವಾರಾಟ ಮಾಡುತ್ತಿರುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನಪರ ಸಂಟನೆಗಳ ಒಕ್ಕೂಟದ ನೇತತ್ವದಲ್ಲಿ ಮಂಗಳವಾರ ಡಿಸಿ ಡಾ.ಸುರೇಶ ಬಿ.ಇಟ್ನಾಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಆಹಾರ ಸುರಕ್ಷತಾ ಇಲಾಖೆ ಹಾಗೂ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷೃದಿಂದ ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಎದುರಾಗಿದೆ. ರಾಸಾಯನಿಕ ಬಳಸಿ ಹಣ್ಣಾಗಿಸಿದ ಹಣ್ಣುಗಳನ್ನು ಸೇವಿಸುವುದರಿಂದ ಕ್ಯಾನ್ಸರ್, ನರಮಂಡಲ ಹಾಗೂ ಜೀಣಾರ್ಂಗ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದ ಪ್ರಮುಖ ವಾರುಕಟ್ಟೆಗಳು ಮತ್ತು ಹಣ್ಣಿನ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ರಾಸಾಯನಿಕ ಬಳಸಿ ಹಣ್ಣಾಗಿಸಿದ ಹಣ್ಣುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.
ಪ್ರತಿ ಜಿಲ್ಲೆಯಲ್ಲಿ ಹಣ್ಣುಗಳ ಗುಣಮಟ್ಟ ಪರೀಕ್ಷೆಗೆ ತುರ್ತು ಪ್ರಯೋಗಾಲಯ ಸ್ಥಾಪನೆ, ವಾವು ಮೇಳಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ನೈಸರ್ಗಿಕ ಮತ್ತು ರಾಸಾಯನಿಕ ಹಣ್ಣುಗಳನ್ನು ಗುರುತಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.
ಜನಪರ ಸಂಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ದಲಿತ ಯುವ ವೇದಿಕೆ ಜಿಲ್ಲಾ ಸಂಚಾಲಕ ಸುಂಕಪ್ಪ ಮೀಸಿ, ಪ್ರಜಾ ಶಕ್ತಿ ಕನ್ನಡಪರ ವೇದಿಕೆಯ ಜಿಲ್ಲಾ ಖಜಾಂಚಿ ಡಿ.ಮುದ್ದುರಾಜ್ ಚನ್ನದಾಸರ್, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಮೊಹಮ್ಮದ್ ಗೌಸ್ ನೀಲಿ, ಬಿಬಿಎಸ್ ಮುಖಂಡರಾದ ಕಾಶಪ್ಪ ಛಲವಾದಿ, ಶಿವರಾಜ್ ಛಲವಾದಿ ಇತರರಿದ್ದರು.