ಕೊಪ್ಪಳದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರದಲ್ಲಿ ಎಡಿಸಿ ಸಿದ್ರಾಮೇಶ್ವರ ಮಾತನಾಡಿದರು. ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಡಿ.ಡಿ.ಪಿ.ಐ ಸೋಮಶೇಖರಗೌಡ ಪಾಟೀಲ, ಕೊಪ್ಪಳದ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಗಂಗಾವತಿ ಕ್ಷೇತ್ರ ಶಿಕ್ಷಣ ಅಧಿಕಾರಿ ನಟೇಶ್​, ಗದಗ ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಐ.ಜಿ. ಪಾಪಣ್ಣ ಇದ್ದರು. 
ಕೊಪ್ಪಳ

ಸರ್ವರಿಗೂ ಸಾಮಾಜಿಕ ನ್ಯಾಯದ ಅರಿವು ಅಗತ್ಯ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಅಭಿಪ್ರಾಯ
  • ಸಾಮಾಜಿಕ ನ್ಯಾಯ ಅರಿವು ಕಾರ್ಯಗಾರ
ಕೊಪ್ಪಳ : ಸಮಾಜದಲ್ಲಿ ಸಾಮಾಜಿಕ ಸಮಾನತೆ, ಹಕ್ಕುಗಳ ರಕ್ಷಣೆ ಹಾಗೂ ದುರ್ಬಲ ವರ್ಗಗಳ ಸಬಲೀಕರಣಕ್ಕೆ ಸಾಮಾಜಿಕ ನ್ಯಾಯ ಅತ್ಯಂತ ಅಗತ್ಯ. ನಾವು ಸಾಮಾಜಿಕ ಸಮಾನತೆಯ ಜತೆಗೆ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ನಗರದ ಜಿಪಂ ಜೆ.ಹೆಚ್​.ಪಟೇಲ್​ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು. ಸಾಮಾಜಿಕ ನ್ಯಾಯವೆಂದರೆ ಸಮಾಜದ ಪ್ರಗತಿಗೆ ಆಧಾರ ಸ್ತಂಭವಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಅಧಿಕಾರಿಗಳು ತಿಳಿಸಬೇಕು ಅಂದಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದರು.
ಗದಗ ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಐ.ಜಿ. ಪಾಪಣ್ಣ ಮಾತನಾಡಿ, ಸಮಾಜದಲ್ಲಿನ ಭೇದಭಾವ ನಿವಾರಿಸಿ ಸುಸ್ಥಿರ ಸಮಾಜ ನಿರ್ಮಿಸುವುದೇ ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶ. ಪ್ರತಿಯೊಬ್ಬರಿಗೂ ಸಮಾನ ಆರ್ಥಿಕ ಅವಕಾಶ, ರಾಜಕೀಯ ಭಾಗವಹಿಸುವಿಕೆ ಹಾಗೂ ಪ್ರತಿನಿಧಿತ್ವ ಸಿಗಬೇಕು. ಪ್ರಜಾಪ್ರಭುತ್ವದ ಯಶಸ್ಸಿಗೆ ಜನರ ಸಕ್ರಿಯ ಭಾಗವಹಿಸುವಿಕೆ ಮತ್ತು ಸಂವಿಧಾನದ ಹಕ್ಕುಗಳ ಸಮರ್ಪಕ ಬಳಕೆ ಅತ್ಯಗತ್ಯ ಎಂದು ತಿಳಿಸಿದರು.
ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಡಿ.ಡಿ.ಪಿ.ಐ ಸೋಮಶೇಖರಗೌಡ ಪಾಟೀಲ, ಕೊಪ್ಪಳದ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಗಂಗಾವತಿ ಕ್ಷೇತ್ರ ಶಿಕ್ಷಣ ಅಧಿಕಾರಿ ನಟೇಶ್​, ಜಿಲ್ಲಾ ಪಂಚಾಯತ ಯೋಜನಾ ವಿಭಾಗದ ಬಸಪ್ಪ, ಗಂಗಾವತಿಯ ತೋಟಗಾರಿಕಾ ಇಲಾಖೆ ಮಣಿಕಂಠ, ಜಂಟಿ ಕೃಷಿ ನಿರ್ದೇಶಕರ ಕಛೇರಿ ಬಿ.ಎಸ್​. ಸತ್ಯನಾರಾಯಣ, ಯಲಬುರ್ಗಾ ಸಾಮಾಜಿಕ ಅರಣ್ಯ ವಲಯದ ಬಸವರಾಜ, ಇತರರಿದ್ದರು.