ಯಲಬುರ್ಗಾ ತಹಸಿಲ್ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ನೂತನ ತಹಸೀಲ್ದಾರ್ ಪ್ರಕಾಶ ನಾಶಿ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಹನಮಂತಪ್ಪ ಕುರಿ, ಪ್ರಮುಖರಾದ ಎಂ.ಎನ್.ಜನಾದ್ರಿ, ಕೆ.ಎಂ.ಗಾಣಗೇರ, ಸಿ.ಎನ್.ರಾಯಬಾಗಿ ಇತರರಿದ್ದರು. 
ಕೊಪ್ಪಳ

ಉತ್ತಮ ಸೇವೆಗೆ ಎಲ್ಲರ ಸಹಕಾರ ಅಗತ್ಯ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ತಹಸಿಲ್ ಕಚೇರಿ
  • ತಹಸೀಲ್ದಾರ್

ಉತ್ತಮ ಸೇವೆಗೆ ಎಲ್ಲರ ಸಹಕಾರ ಅಗತ್ಯ

ಯಲಬುರ್ಗಾ: ನೂತನ ತಹಸೀಲ್ದಾರ್ ಪ್ರಕಾಶ ನಾಶಿ ಅವರನ್ನು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಮಂಗಳವಾರ ಪಟ್ಟಣದ ತಹಸಿಲ್ ಕಚೇರಿಯಲ್ಲಿ ಗೌರವಿಸಲಾಯಿತು.
ನಂತರ ನಿವೃತ್ತ ನೌಕರರ ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಮನವಿ ಮಾಡಿದರು. ತಹಸೀಲ್ದಾರ್ ಪ್ರಕಾಶ ನಾಶಿ ಮಾತನಾಡಿ, ತಾಲೂಕಿನಲ್ಲಿ ಕಂದಾಯ ಇಲಾಖೆಯಿಂದ ಉತ್ತಮ ಸೇವೆ ಮಾಡುವ ಕನಸು ಹೊಂದಿದ್ದೇನೆ.
ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಪ್ರತಿಯೊಬ್ಬರ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದರು. ಸಂಘದ ಅಧ್ಯಕ್ಷ ಹನಮಂತಪ್ಪ ಕುರಿ, ಪ್ರಮುಖರಾದ ಎಂ.ಎನ್.ಜನಾದ್ರಿ, ಕೆ.ಎಂ.ಗಾಣಗೇರ, ಸಿ.ಎನ್.ರಾಯಬಾಗಿ ಇತರರಿದ್ದರು.