ಕೊಪ್ಪಳದ ಗದಗ ರಸ್ತೆಯಲ್ಲಿರುವ ಶಿವಾ ಸಾಮಿಲ್ ಬಳಿ ರೈತರು ಯೂರಿಯಾ ಗೊಬ್ಬರ ಪಡೆಯಲು ಮಂಗಳವಾರ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತಿರುವುದು. 
ಕೊಪ್ಪಳ

ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ

ಕುರುವತ್ತಿ ಶ್ರೀಕಾಂತಪ್ಪ

ಪ್ರಮುಖ ಮುಖ್ಯಾಂಶಗಳು

  • ಮಳೆಯಲ್ಲೇ ಕಾದುನಿಂತ ಕೃಷಿಕರು
ಕೊಪ್ಪಳ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ನಗರದ ಗದಗ ರಸ್ತೆಯಲ್ಲಿರುವ ಶಿವಾ ಸಾಮಿಲ್ ಬಳಿ ರೈತರು ಯೂರಿಯಾ ಗೊಬ್ಬರ ಪಡೆಯಲು ಬೆಳಗ್ಗೆಯಿಂದಲೇ ಸರತಿಯಲ್ಲಿ ನಿಂತು ಕಾಯುತ್ತಿರುವುದು ಕಂಡು ಬಂದಿತು.
ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗುತ್ತಿದ್ದರೂ ಅದನ್ನು ಲೆಕ್ಕಿಸದೇ ರೈತರು ಗೊಬ್ಬರಕ್ಕಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ. ಜಿಲ್ಲೆಯಲ್ಲಿ ಮಳೆಯ ಪ್ರವಾಣ ಹೆಚ್ಚಾಗಿರುವುದರಿಂದ ಬಿತ್ತನೆ ಮತ್ತು ಬೆಳೆ ನಿರ್ವಹಣಾ ಕಾರ್ಯಗಳು ಆರಂಭವಾಗಿದ್ದು, ಯೂರಿಯಾ ಗೊಬ್ಬರದ ಅವಶ್ಯಕತೆ ಹೆಚ್ಚಿದೆ. ಹೀಗಾಗಿ ವಿತರಣಾ ವ್ಯವಸ್ಥೆ ಮತ್ತಷ್ಟು ಸುಗಮಗೊಳಿಸಬೇಕೆಂಬುದು ರೈತರ ಒತ್ತಾಯವಾಗಿದೆ.