ಕೊಪ್ಪಳದ ಗದಗ ರಸ್ತೆಯಲ್ಲಿರುವ ಶಿವಾ ಸಾಮಿಲ್​ ಬಳಿ ರೈತರು ಯೂರಿಯಾ ಗೊಬ್ಬರ ಪಡೆಯಲು ಬೆಳಗ್ಗೆಯಿಂದಲೇ ಸರತಿಯಲ್ಲಿ ನಿಂತು ಗೊಬ್ಬರಕ್ಕಾಗಿ ಆತುರಿಯುತ್ತಿರುವ ರೈತರು. 
ಕೊಪ್ಪಳ

ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ

ಪ್ರಮುಖ ಮುಖ್ಯಾಂಶಗಳು

  • ಮಳೆಯ ನಡುವೆಯೂ ಕಾದು ನಿಂತ ರೈತರು
ಕೊಪ್ಪಳ : ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ನಗರದ ಗದಗ ರಸ್ತೆಯಲ್ಲಿರುವ ಶಿವಾ ಸಾಮಿಲ್​ ಬಳಿ ರೈತರು ಯೂರಿಯಾ ಗೊಬ್ಬರ ಪಡೆಯಲು ಬೆಳಗ್ಗೆಯಿಂದಲೇ ಸರತಿಯಲ್ಲಿ ನಿಂತು ಗೊಬ್ಬರಕ್ಕಾಗಿ ಆತುರಿಯುತ್ತಿರುವ ರೈತರು.
ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಧ್ಯೆ ಮಧ್ಯೆ ತುಂತುರು ಮಳೆಯಾಗುತ್ತಿದ್ದರೂ ಅದನ್ನು ಲೆಕ್ಕಿಸದೇ ರೈತರು ಗೊಬ್ಬರಕ್ಕಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಬಿತ್ತನೆ ಮತ್ತು ಬೆಳೆ ನಿರ್ವಹಣಾ ಕಾರ್ಯಗಳು ಆರಂಭವಾಗಿದ್ದು, ಈ ಸಂದರ್ಭದಲ್ಲಿ ಯೂರಿಯಾ ಗೊಬ್ಬರದ ಅವಶ್ಯಕತೆ ಹೆಚ್ಚಿದೆ ಎಂದು ರೈತರು ತಿಳಿಸಿದ್ದಾರೆ.
ಕೃಷಿ ಚಟುವಟಿಕೆಗಳ ಪ್ರಮುಖ ಹಂತದಲ್ಲಿ ರೈತರಿಗೆ ಬೇಕಾದ ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಲಭ್ಯವಾಗುವುದು ಅತ್ಯಗತ್ಯವಾಗಿದ್ದು, ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವಂತೆ ರೈತರ ಒತ್ತಾಯವಾಗಿದೆ.