ಗಂಗಾವತಿ ತಾಲೂಕಿನ ಹೊಸಳ್ಳಿಯಲ್ಲಿ ಶ್ರೀ ಗಂಗಾಪರಮೇಶ್ವರಿ ದೇವಾಲಯ ವಾರ್ಷಿಕೋತ್ಸವ ಮತ್ತು ಜಯಂತ್ಯುತ್ಸವ ನಿಮಿತ್ತ ಮಹಾರಥೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
ಗಂಗಾವತಿ: ತಾಲೂಕಿನ ಹೊಸಳ್ಳಿಯ ಆರಾಧ್ಯ ದೈವ ಶ್ರೀ ಗಂಗಾಪರಮೇಶ್ವರಿ ದೇವಾಲಯದ ವಾರ್ಷಿಕೋತ್ಸವ ಮತ್ತು ಜಯಂತ್ಯುತ್ಸವ ನಿಮಿತ್ತ ಮಹಾರಥೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
ಗಂಗಾಮತ ಸಮಾಜದಿಂದ ಹಮ್ಮಿಕೊಂಡಿದ್ದು, ಜೂ.23ರಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಭಾವಚಿತ್ರವನ್ನು ಕುಂಭ, ಕಲಶದೊಂದಿಗೆ ಗ್ರಾಮದ ರಾಜಬೀದಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ದೇವಾಲಯದಲ್ಲಿನ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ, ಮಡಿತೇರು ಮತ್ತು ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಸಂಜೆ ಸರ್ವಾಲಂಕೃತ ರಥೋತ್ಸವನ್ನು ಪಾದಗಟ್ಟೆವರೆಗೆ ಭಕ್ತ ಸಮೂಹದೊಂದಿಗೆ ಅದ್ದೂರಿಯಾಗಿ ನೆರವೇರಿಸಲಾಯಿತು.
ಸಾನ್ನಿಧ್ಯವಹಿಸಿದ್ದ ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಅಶೀರ್ವಚನ ನೀಡಿದರು. ಮಾಜಿ ಶಾಸಕ ಪರಣ್ಣಮುನವಳ್ಳಿ, ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ನಾಗಪ್ಪ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಗಂಗಾಮತ ಸಮಾಜದ ರಾಜ್ಯ ಉಪಾಧ್ಯಕ್ಷ ರಾಜಶೇಖರಪ್ಪ ಮಷ್ಟೂರು, ಪದಾಧಿಕಾರಿಗಳು ಮತ್ತು ವಿವಿಧ ಗ್ರಾಮದ ಭಕ್ತರು ಭಾಗವಹಿಸಿದ್ದರು.