- ಸಿ.ವಿ. ಚಂದ್ರಶೇಖರ ಸೂಚನೆ
- ಗ್ರಾಮ ಮಟ್ಟದಲ್ಲಿ ಪ್ರತ್ಯೇಕ ಉಸ್ತುವಾರಿಗಳ ನೇಮಕ
ಕೊಪ್ಪಳ : ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಪೂರ್ವಸಿದ್ಧತೆ ಆರಂಭಿಸಿ, ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸುವ ಕೆಲಸ ಕೈಗೊಳ್ಳಬೇಕು ಎಂದು ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹೇಳಿದರು.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟಗಳಲ್ಲಿ ಪ್ರತ್ಯೇಕ ಉಸ್ತುವಾರಿಗಳನ್ನು ನೇಮಕ ಮಾಡಿ ಪಕ್ಷ ಸಂಘಟನೆ ಬಲಪಡಿಸಲು ಜೆಡಿಎಸ್ ಜಿಲ್ಲಾ ಘಟಕ ತೀಮಾರ್ನಿಸಿದೆ.
ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕೊಪ್ಪಳ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ಇದೇ ಉತ್ಸಾಹದೊಂದಿಗೆ ಇನ್ನಫಿ್ಟು ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎಂದು ಕರೆ ನೀಡಿದರು. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಎಲ್ಎಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದು, ಮಳೆ ಕೊರತೆಯಿಂದ ಬಿತ್ತನೆ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇರುವುದರಿಂದ ಉತ್ತಮ ಮಳೆಯಾಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.
ತಾಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲೆಗೆ ಶಿಕ್ಷಣ ಹಾಗೂ ನೀರಾವರಿ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.
ಜಿಲ್ಲಾ ಉಪಾಧ್ಯಕ್ಷ ಕರಿಯಪ್ಪ ಹಾಲವರ್ತಿ, ಜೆಡಿಎಸ್&ಬಿಜೆಪಿ ಮೈತ್ರಿ ಮುಂದಿನ ಚುನಾವಣೆಯಲ್ಲೂ ಬಲಿಷ್ಠವಾಗಿ ಎದುರಿಸಲಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳನ್ನು ಕಾರ್ಯಕರ್ತರು ತಡೆಯಬೇಕು ಎಂದರು. ಬರ ಪರಿಹಾರ ಕಾಮಗಾರಿ, ಬೆಳೆ ವಿಮೆ, ಪಕ್ಷ ಸಂಘಟನೆ, ಸ್ಥಳಿಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ಪದಾಧಿಕಾರಿಗಳಾದ ಮಂಜುನಾಥ್ ಸೊರಟೂರ, ಸೈಯದ್ ಮಹೇಮೂದ್ ಹುಸೇನಿ ಬಲ್ಲೆ, ಮೂರ್ತೆಪ್ಪ ಗಿಣಿಗೇರಿ, ರಮೇಶ ಡಂಬ್ರಳ್ಳಿ, ವಿರೇಶಗೌಡ್ರ ದಳಪತಿ, ನಿಮಾರ್ಲಾ ಮೇದಾರ, ರತ್ನಮ್ಮ ಹಿರೇಮಠ, ಶರಣಮ್ಮ, ಜಯಶ್ರೀ, ವಿಜಯಲಕ್ಷಿ$್ಮ, ಸೋಮನಗೌಡ ಹೊಗರನಾಳ, ಗಂಗಾಧರ ವಸ್ತ್ರದ, ಸುರೇಶ ದದಗಲ್, ಶಿವಕುಮಾರ ಏಣಿಗಿ, ಮಾರುತಿಗೌಡ ಪೊಲೀಸ್ ಪಾಟೀಲ್, ಸಿರಾಜ್ ಬಿಜಾಪುರ್ ಇತರರಿದ್ದರು.