ಕೊಪ್ಪಳದಲ್ಲಿ ಸೋಮವಾರ ಎಡಿಸಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಅಬಕಾರಿ ಡಿವೈಎಸ್​ಪಿ ಶಾಂತೇಶ ಕಮತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ಅಮರೇಶ ಹಾವಿನ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಇದ್ದರು.  
ಕೊಪ್ಪಳ

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿದ್ಧರಾಗಿ

ರವೀಂದ್ರ ರಡ್ಡಿ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಸೂಚನೆ

ಕೊಪ್ಪಳ : ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ಆ.16ರಂದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಹಟ್ಟಿ ಗ್ರಾಮವನ್ನು 2026ನೇ ಸಾಲಿನ ರಾಜ್ಯ ಸಂಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಜೆ 4.30 ಗಂಟೆಗೆ ಸಮಾರಂಭ ಇರಲಿದ್ದು, ವಿವಿಧ 10 ಗ್ರಾಮಗಳಿಗೆ ಮದ್ಯ ಮಾರಾಟ ಮುಕ್ತ ಅಭಿನಂದನಾ ಪ್ರಶಸ್ತಿ ವಿತರಣೆ ಇರಲಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಬೇಕು. ರಸ್ತೆ ದುರಸ್ತಿ ಮಾಡಿ. ವೇದಿಕೆ ನಿರ್ಮಿಸಿ. ಜನರಿಗೆ ಅನುಕೂಲವಾಗಲು ಸಾರಿಗೆ ಬಸ್​ ಕಲ್ಪಿಸಿ. ಆಸನ, ಕುಡಿವ ನೀರು, ಊಟ ವ್ಯವಸ್ಥೆ ಕಲ್ಪಿಸಿ. ಕಾರ್ಯಕ್ರಮ ದಿನ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗದಿರಲಿ. ಎಲ್ಲ ಅಧಿಕಾರಿಗಳು ಭಾಗಿಯಾಗಿ. ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಕರೆತನ್ನಿ ಎಂದು ತಿಳಿಸಿದರು.
ಸಭೆಯಲ್ಲಿ ಗಾಂಧಿ ಬಳಗದ ಸದಸ್ಯರಾದ ಸಾವಿತ್ರಿ ಮುಜುಮದಾರ, ಪ್ರಮೋದ್​ ಕುಲಕರ್ಣಿ, ಅಬಕಾರಿ ಡಿವೈಎಸ್​ಪಿ ಶಾಂತೇಶ ಕಮತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ ಹಾವಿನ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ, ಪ್ರಾದೇಶಿಕ ಸಾರಿಗೆ ಇಲಾಖೆ ಅಧೀಕ್ಷಕ ನಾಗೇಶ ಇತರರಿದ್ದರು.