ಶ್ರೀರಾಮನಗರ ಹೊರವಲಯದ ಹೊಲವೊಂದರಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆ ಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಶುಕ್ರವಾರ ಮಾತನಾಡಿದರು. ತಾಪಂ ಇಒ ರಾಮರೆಡ್ಡಿ ಪಾಟೀಲ್, ಗ್ರಾಪಂ ಪಿಡಿಒ ನಾಗೇಶ ಕುರ್ಡಿ, ಪ್ರಮುಖರಾದ ರಾಮಕೃಷ್ಣ, ಮಹೆಬೂಬ್ ಇತರರಿದ್ದರು.
ಗಂಗಾವತಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳಾ ಸ್ವಾವಲಂಬನೆಗೆ ಪೂರಕವಾಗಿದ್ದು, ಕುಟುಂಬ ನಿರ್ವಹಣೆಗೆ ನೆರವಾಗಿವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ತಾಲೂಕಿನ ಶ್ರೀರಾಮನಗರ ಹೊರವಲಯದ ಹೊಲವೊಂದರಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಿದ್ದು, ಅರ್ಹ ಲಾನುಭವಿಗಳಿಗೆ ಯೋಜನೆ ತಲುಪಿದೆ. ಶಕ್ತಿ ಯೋಜನೆಯಡಿ ಹಲವು ಧಾರ್ಮಿಕ ಕ್ಷೇತ್ರಗಳನ್ನು ವೀಕ್ಷಿಸಲು ಸಾಧ್ಯವಾಗಿದೆ. ಅನ್ನಭಾಗ್ಯ ಯೋಜನೆಯ ಪಡಿತರವನ್ನು 20 ದಿನಗಳವರೆಗೆ ವಿತರಿಸುವ ವ್ಯವಸ್ಥೆ ಮಾಡಿದ್ದು, ನಿರ್ಲಕ್ಷಿಸುವಂತಿಲ್ಲ. ಲಾನುಭವಿಗಳು ಮೃತಪಟ್ಟಿದ್ದರೆ ಕೂಡಲೇ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕಿದ್ದು, ಹೊಸ ಲಾನುಭವಿಗಳ ನೋಂದಣೆಗೂ ಅವಕಾಶ ಕಲ್ಪಿಸಲಾಗಿದೆ. ಅನುಷ್ಠಾನದಲ್ಲಿ ಸಮಸ್ಯೆಗಳಿದ್ದಲ್ಲಿ ಸಮಿತಿ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ಯೋಜನೆ ಉದ್ದೇಶ, ಅನುಷ್ಠಾನ ಪ್ರಮಾಣ ಮತ್ತು ಅರ್ಹ ಲಾನುಭವಿಗಳ ಪಟ್ಟಿ ಕುರಿತು ತಾಪಂ ಇಒ ರಾಮರೆಡ್ಡಿ ಪಾಟೀಲ್ ಮಾಹಿತಿ ನೀಡಿದರು. ಗ್ರಾಪಂ ಪಿಡಿಒ ನಾಗೇಶ ಕುರ್ಡಿ, ಪ್ರಮುಖರಾದ ರಾಮಕೃಷ್ಣ, ಮಹೆಬೂಬ್ ಇತರರಿದ್ದರು.