ಕೊಪ್ಪಳ ತಾಪಂ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಉದ್ಘಾಟಿಸಿದರು. 
ಕೊಪ್ಪಳ

ಗ್ಯಾರಂಟಿಯಿಂದ ಜೀವನಮಟ್ಟ ಸುಧಾರಣೆ

ಶಾಮಸುಂದರ್ ಕೊಪ್ಪಳಕರ್
ಕೊಪ್ಪಳ: ಪಂಚ ಗ್ಯಾರಂಟಿಗಳಿಂದ ಮಹಿಳೆಯರಿಗೆ ಬಹಳಷ್ಟು ಉಪಯೋಗಿದೆ. ಅವರ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಅಭಿಪ್ರಾಯಪಟ್ಟರು.
ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಕುರಿತ ಮಹಿಳೆಯರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಸಮಾಜದಲ್ಲಿ ಮಹಿಳೆಯ ಶಕ್ತಿ ಪುರುಷರಿಗಿಂತ ದೊಡ್ಡದು. ಪ್ರತಿಯೊಂದು ಕುಟುಂಬವು ಸುಗಮವಾಗಿ ನಡೆಯುತ್ತಿದೆ ಎಂದರೆ ಅಲ್ಲಿ ಮಹಿಳೆಯ ಪಾತ್ರ ಪ್ರಮುಖವಾದುದು. ಅವರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಸ್ಯಾಮುವೆಲ್ ಮಾತನಾಡಿ, ಗ್ಯಾರಂಟಿಗಳ ಪ್ರಯೋಜನ ಮತ್ತು ಅರ್ಹತೆಗಳ ಕುರಿತು ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ ಎಂದರು.
ತಾಲೂಕು ಪಂಚಾಯತಿ ಇಒ ದುಂಡಪ್ಪ ತುರಾದಿ ಮಾತನಾಡಿ, ಗ್ಯಾರಂಟಿಗಳಿಂದ ಬಡವ, ಮಧ್ಯಮವರ್ಗ ಹಾಗೂ ದೀನ ದಲಿತರಿಗೆ ಬಹಳಷ್ಟು ಅನುಕೂಲವಾಗಿದೆ. ಈ ಯೋಜನೆಗಳ ಪ್ರಯೋಜನ ಪ್ರತಿ ಕುಟುಂಬಕ್ಕೂ ತಲುಪಲು ಅನುಷ್ಠಾನ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಮಾನ್ವಿ ಪಾಶಾ, ಅನ್ನದಾನಯ್ಯಸ್ವಾಮಿ, ಸವಿತಾ ಅಶೋಕ ಗೊರಂಟ್ಲಿ, ಪರಶುರಾಮ ಕೊರವರ, ಲಕ್ಷ್ಮ್ಮಣ ಡೊಳ್ಳಿನ, ಜ್ಯೋತಿ ಗೊಂಡಬಾಳ, ರಾಮಣ್ಣ ಚೌಡ್ಕಿ, ಪಿಡಿಒ ಗೀತಾ ಕುಮಾರಿ, ಗ್ರಾಮ ಕಾಯಕ ಮಿತ್ರ ಯಮನಮ್ಮ ಪೂಜಾರ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.