ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಬ್ರಾಹ್ಮಣ ಅಭ್ಯರ್ಥಿಗಳ ಜನಿವಾರ ತೆಗಿಸಿದ್ದನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪದಾಧಿಕಾರಿಗಳು ಗುರುವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳಗೆ ಮನವಿ ಸಲ್ಲಿಸಿದರು. ಗುರುರಾಜ ಎನ್. ಜೋಶಿ, ಎಚ್.ಬಿ. ದೇಶಪಾಂಡೆ, ವೇಣುಗೋಪಾಲ ಜಹಗೀರದಾರ, ಶ್ರೀನಿವಾಸ ಜೋಶಿ, ರವಿಕುವಾರ್ ಕುಲಕರ್ಣಿ ಇದ್ದರು.
- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಟಕ ಒತ್ತಾಯ
ಕೊಪ್ಪಳ: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಟಕ ಗುರುವಾರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಚಿಕ್ಕಬಳ್ಳಾಪುರದ ನಾಗಾರ್ಜುನ ಪಿಯು ಕಾಲೇಜು ಹಾಗೂ ಬೆಂಗಳೂರಿನ ಕೋರಮಂಗಲದ ಕೃಪಾನಿಧಿ ಕಾಲೇಜಿನಲ್ಲಿ ಪರೀಕ್ಷಾ ಪರಿಶೀಲನೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಂತಾಗಿದೆ. ಯಜ್ಞೋಪವೀತವು ಧಾರ್ಮಿಕ ನಂಬಿಕೆಯ ಸಂಕೇತವಾಗಿದ್ದು, ಅದನ್ನು ಕತ್ತರಿಸಿರುವುದು ಬ್ರಾಹ್ಮಣ ಸಮುದಾಯದ ಭಾವನೆಗಳಿಗೆ ನೋವುಂಟು ವಾಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಟನೆಗೆ ಕಾರಣವಾದ ಎರಡೂ ಶಿಕ್ಷಣ ಸಂಸ್ಥೆಗಳ ವಾನ್ಯತೆ ರದ್ದುಪಡಿಸಿ, ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಟನೆಗಳು ಮರುಕಳಿಸದಂತೆ ಸರ್ಕಾರ ಸ್ಪಷ್ಟ ವಾರ್ಗಸೂಚಿ ರೂಪಿಸಬೇಕು ಎಂದು ಒತ್ತಾಯಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಟಕದ ಚುನಾಯಿತ ಪ್ರತಿನಿಧಿ ಗುರುರಾಜ ಎನ್. ಜೋಶಿ, ಎಚ್.ಬಿ. ದೇಶಪಾಂಡೆ, ವೇಣುಗೋಪಾಲ ಜಹಗೀರದಾರ, ಶ್ರೀನಿವಾಸ ಜೋಶಿ, ರವಿಕುವಾರ್ ಕುಲಕರ್ಣಿ, ಅರವಿಂದ ದಿಗ್ಗಾವಿ, ಜಗನ್ನಾಥ ಹುನಗುಂದ ಇತರರಿದ್ದರು.