ಕೊಪ್ಪಳ-ತಳಕಲ್​ ನಗರ ಸಾರಿಗೆ ಬಸ್​ಗೆ ಬುಧವಾರ ಕೊಪ್ಪಳದಲ್ಲಿ ಶಾಸಕ ರಾವೇಂದ್ರ ಹಿಟ್ನಾಳ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕೆಕೆಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಇದ್ದರು.  
ಕೊಪ್ಪಳ

ಕೊಪ್ಪಳ-ತಳಕಲ್​ ಮಾರ್ಗ ಬಸ್​ ಸೇವೆ ಆರಂಭ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಹಿಟ್ನಾಳ ಚಾಲನೆ
ಕೊಪ್ಪಳ : ಜಿಲ್ಲಾ ಕೇಂದ್ರ ಕೊಪ್ಪಳದಿಂದ ತಳಕಲ್​ವರೆಗೆ ನಗರ ಸಾರಿಗೆ ಸೇವೆ ಆರಂಭಿಸಿದ್ದು, ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಶಾಸಕ ರಾವೇಂದ್ರ ಹಿಟ್ನಾಳ ಹೇಳಿದರು.
ನಗರದ ಕೇಂದ್ರ ಬಸ್​ ನಿಲ್ದಾಣದಲ್ಲಿ ನೂತನ ಬಸ್​ಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಕೊಪ್ಪಳ-ತಳಕಲ್​-ಡಿಸಿ ಆಫೀಸ್​ ಮಾರ್ಗದಲ್ಲಿ ನೂತನ ನಗರ ಸಾರಿಗೆ ಬೇಕೆಂದು ಬೇಡಿಕೆ ಇತ್ತು. ಪ್ರಯಾಣಿಕರ ಮನವಿಗೆ ಸ್ಪಂದಿಸಿ ಸೇವೆ ಆರಂಭಿಸಲಾಗಿದೆ. ಸಾರ್ವಜನಿಕರಿಗೆ ಕೊಪ್ಪಳ ನಗರ ಸಂಚಾರ ಮತ್ತು ಜಿಲ್ಲಾಸ್ಪತ್ರೆ, ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ನೆರವಾಗಲಿದೆ. ತಳಕಲ್​ ಇಂಜಿನಿಯರಿಂಗ್​ ಕಾಲೇಜು, ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳಿಗೂ ಅನುಕೂಲ. ಶಕ್ತಿ ಯೋಜನೆಯಡಿ ಮಹಿಳಾ ಫಲಾನುಭವಿಗಳು ನಗರ ಸಾರಿಗೆಯಲ್ಲೂ ಉಚಿತ ಪ್ರಯಾಣ ಮಾಡಬಹುದು. ಎಲ್ಲರೂ ಇದರ ಸದ್ಬಳಕೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ತಾಲೂಕು ಅಧ್ಯಕ್ಷ ಬಾಲಚಂದ್ರನ್​, ಸದಸ್ಯ ಪರಶುರಾಮ್​, ಕೆಕೆಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ, ಕಾರ್ಮಿಕ ಕಲ್ಯಾಣ ಅಧಿಕಾರಿ ಸತ್ಯನಾರಾಯಣ, ಸಾಂಖಿಕ ಅಧಿಕಾರಿ ಎಂ.ಡಿ. ಶಬ್ಬೀರ್​, ಲೆಕ್ಕಾಧಿಕಾರಿ ಚಿತ್ತವಡಿಗಪ್ಪ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಇತರರಿದ್ದರು.