ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ&ಬೆಲ್ಸ್ ವಿತರಣೆ ಕಾರ್ಯಕ್ರಮವನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ವಿದ್ಯಾರ್ಥಿನಿಯರಿಗೆ ಡ್ರಾಗನ್ ಸ್ಟೀಕ್ ನೀಡುವ ಮೂಲಕ ಉದ್ಘಾಟಿಸಿದರು. ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಮುಖ್ಯಸ್ಥ ಎಚ್.ವಿ.ರಾಜಾಬಕ್ಷಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ, ಕರ್ನಾಟಕದ ನ್ಯಾಷನಲ್ ಶುಟೋಕಾನ್ ಕರಾಟೆ ಅಸೋಶಿಯೇಷನ್ ಅಧ್ಯಕ್ಷ ಬಿ.ಬಾಷಾಸಾಹೇಬ, ಹಿರಿಯ ಹೋರಾಟಗಾರ ನಜೀರ್ ಮೂಲಿಮನಿ, ಮಾಜಿ ನಗರಸಭಾ ಸದಸ್ಯ ಮಾನ್ವಿ ಪಾಷಾ ಇದ್ದರು.
- ವಿಠ್ಠಲ್ ಜಾಬಗೌಡರ ಅಭಿಪ್ರಾಯ
- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕೊಪ್ಪಳ : ಕರಾಟೆಯನ್ನು ಎಲ್ಲಾ ಶಾಲಾ&ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು. ಇಂದಿನ ದಿನಗಳಲ್ಲಿ ಮಹಿಳೆ ಮತ್ತು ಹೆಣ್ಣು ಮಕ್ಕಳು ತಮ್ಮ ಸ್ವಯಂ ರಕ್ಷಣೆ ಮಾಡುವ ಕಲೆಯಾದ ಕರಾಟೆಯನ್ನು ಕಲಿಯುವುದು ಅತೀ ಮುಖ್ಯವಾಗಿದೆ. ಇದರಿಂದ ದೈಹಿಕವಾಗಿ ಶಕ್ತಿವಂತರಾಗುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯೂ ಸಾದ್ಯವಾಗುತ್ತದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ&ಬೆಲ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳಾ ದಿನಾಚರಣೆ ನಿಮಿತ್ಯ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ನಿಜಕ್ಕೂ ಅರ್ಥಪೂರ್ಣ. ವಿವಿಧ ಶಾಲೆಯ ಮಕ್ಕಳು ಇದರಲ್ಲಿ ಭಾಗವಹಿಸಿ ಪ್ರದರ್ಶನ ಮಾಡಿ ಬೆಲ್ಟ್ ಪಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಲಿಂಗದಳ್ಳಿಯ ಎಪಿಜೆ ಅಬ್ದುಲ್ ಕಲಾಂ ಸಿಬಿಎಸ್ಸಿ ಶಾಲೆ, ತಳಕಲ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಹಿಟ್ನಾಳ ಶಾಲೆಯ 250 ವಿದ್ಯಾರ್ಥಿನಿಯರು ಭಾಗವಹಿಸಿ ಕರಾಟೆ ಪ್ರದರ್ಶನವನ್ನು ಮಾಡಿದರು. ವಿದ್ಯಾರ್ಥಿತಿಗಳಿಗೆ ಬೆಲ್ಟ್ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಮುಖ್ಯಸ್ಥ ಎಚ್.ವಿ.ರಾಜಾಬಕ್ಷಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ, ಕರ್ನಾಟಕದ ನ್ಯಾಷನಲ್ ಶುಟೋಕಾನ್ ಕರಾಟೆ ಅಸೋಶಿಯೇಷನ್ ಅಧ್ಯಕ್ಷ ಬಿ.ಬಾಷಾಸಾಹೇಬ, ಹಿರಿಯ ಹೋರಾಟಗಾರ ನಜೀರ್ ಮೂಲಿಮನಿ, ಮಾಜಿ ನಗರಸಭಾ ಸದಸ್ಯ ಮಾನ್ವಿ ಪಾಷಾ, ತರಬೇತುದಾರರಾದ ದೀಪಾ ಮತ್ತು ರೋಹಿಣಿ ಇತರರಿದ್ದರು.