ಕನಕಗಿರಿ ತಹಸಿಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಜಾಗೃತಿ ಸಭೆಯಲ್ಲಿ ತಹಸೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿದರು. ಟಿಎಒ ಗೌರಿಶಂಕರ್, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಇತರರಿದ್ದರು. 
ಕೊಪ್ಪಳ

ಮಕ್ಕಳು ಪೋಲಿಯೋದಿಂದ ವಂಚಿತರಾಗದಿರಲಿ

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಪಲ್ಸ್ ಪೋಲಿಯೋ
  • ಅಂಗವಿಕಲತೆ

ಮಕ್ಕಳು ಪೋಲಿಯೋದಿಂದ ವಂಚಿತರಾಗದಿರಲಿ

ಕನಕಗಿರಿ: ತಾಲೂಕಿನಾದ್ಯಂತ ಡಿ.21ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಸಂಬಂಧಿಸಿದ ಇಲಾಖೆಗಳ ಸಹಕಾರ ಅಗತ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಗೌರಿ ಶಂಕರ್ ಹೇಳಿದರು.
ನಗರದ ತಹಸಿಲ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಪಲ್ಸ್ ಪೋಲಿಯೋ ದೇಶದ ಭವಿಷ್ಯದ ಮಕ್ಕಳ ಅಂಗವಿಕಲತೆ ತಡೆಗಟ್ಟಲು ರಾಜ್ಯಾದ್ಯಂತ ನಡೆಯುತ್ತದೆ. ಪಲ್ಸ್ ಪೋಲಿಯೋದಿಂದ ಯಾವ ಮಕ್ಕಳು ವಂಚಿತರಾಗಬಾರದು.
ತಾಲೂಕಿನಲ್ಲಿ 5 ವರ್ಷದೊಳಗಿನ 12,450 ಮಕ್ಕಳಿಗೆ ಪೋಲಿಯೋ ಹಾಕಿಸಬೇಕು. ತಾಲೂಕಿನಲ್ಲಿ 54 ತಂಡಗಳು ಕಾರ್ಯನಿರ್ವಹಿಸಲಿದ್ದು, 11 ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ. ಮೊದಲ ದಿನ ಅಂಗನವಾಡಿ ಬೂತ್‌ಗಳಲ್ಲಿ ನಂತರ ಮನೆ ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು ಎಂದರು.
ತಹಸೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, ಡಿ.20ರಂದು ಶಾಲಾ ಮಕ್ಕಳಿಂದ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಡಿ.18ಕ್ಕೆ ವ್ಯಾಕ್ಸಿನ್ ಬಂದಿದ್ದು, 19ರಿಂದ ಜೆಸ್ಕಾಂ ಇಲಾಖೆ ಅವರು ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರ, ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಲೈನ್‌ನಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಹಾಗೂ ಸಹಾಯಕಿಯರು ಭಾನುವಾರವೂ ಕರ್ತವ್ಯ ನಿರ್ವಹಿಸಬೇಕು. ಭಾನುವಾರ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಕಲ್ಪಿಸಲು ತಾಪಂ ಹಾಗೂ ಮುಖ್ಯಾಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಗೌರಿಶಂಕರ್, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಆಶಾ ಬೇಗಂ, ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯರಾದ ಕಾವ್ಯಾ, ರೇಖಾ, ಉಪ ತಹಸೀಲ್ದಾರ್ ಅನಿತಾ ಇಂಡಿ, ಇಸಿಒ ಶ್ರೀನಾಥ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಜಯ ಪ್ರಸಾದ, ಹುಸೇನ್‌ಬಾಷಾ, ಶಿವಕುಮಾರ, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ತೋಳದ, ಐಸಿಟಿಸಿ ಆಪ್ತ ಸಮಾಲೋಚಕ ಸಿದ್ರಾಮಪ್ಪ ಇತರರಿದ್ದರು.