ಗಂಗಾವತಿ ಸರ್.ಎಂ.ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಲಿಟಲ್‌ಹಾರ್ಟ್ಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಇಸ್ರೋ ಹಿರಿಯ ವಿಜ್ಞಾನಿ ಎಚ್.ಎಲ್.ಶ್ರೀನಿವಾಸ ಉದ್ಘಾಟಿಸಿದರು. ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯಶಿಕ್ಷಕಿ ಪ್ರಿಯಾಕುಮಾರಿ ಇತರರಿದ್ದರು. 
ಕೊಪ್ಪಳ

ವಿದ್ಯಾರ್ಥಿಗಳು ಅವಿಷ್ಕಾರಗಳತ್ತ ಗಮನಹರಿಸಲಿ

ರುದ್ರಪ್ಪ ವಾಲಿ

ಗಂಗಾವತಿ: ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಮೂಡಿಸಬೇಕಿದೆ ಎಂದು ಇಸ್ರೋ ಹಿರಿಯ ವಿಜ್ಞಾನಿ ಎಚ್.ಎಲ್.ಶ್ರೀನಿವಾಸ ಹೇಳಿದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಲಿಟಲ್‌ಹಾರ್ಟ್ಸ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶ 2035ರ ವೇಳೆಗೆ ವಿಶ್ವದ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಗೆ ತರಲು ತಂತ್ರಜ್ಞಾನದ ನೆರವು ಮುಖ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಹೊಸ ಅವಿಷ್ಕಾರಗಳತ್ತ ಗಮನಹರಿಸಬೇಕು. ಜೀವನದಲ್ಲಿ ದೊಡ್ಡ ಕನಸುಗಳನ್ನು ಕಾಣಬೇಕು. ಅದನ್ನು ನನಸಾಗಿಸಲು ವೈಜ್ಞಾನಿಕ ಚಿಂತನೆ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚಾಮರಾಜನಗರದ ಗ್ರಾೃವಿಟಿ ೌಂಡೇಷನ್ ಸ್ಥಾಪಕ ಅಭಿಷೇಕ್ ಮಾತನಾಡಿ, ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ವಿಜ್ಞಾನ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಾಗಬೇಕಿದೆ ಎಂದರು.
ಶಾಲಾವರಣದಲ್ಲಿ 10ಲಕ್ಷ ರೂ.ವೆಚ್ಚದಲ್ಲಿ ಅಳವಡಿಸಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಕರಗಳ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯಶಿಕ್ಷಕಿ ಪ್ರಿಯಾಕುಮಾರಿ, ಎಐ ತರಬೇತುಗಾರ್ತಿ ನಳಿನಿ, ಶಿಕ್ಷಕಿಯರಾದ ನಿರೋಷಾ, ಗೌರಿ ಇತರರಿದ್ದರು.