ಗಂಗಾವತಿ ಉಳ್ಳಿಡಗ್ಗಿಯ ಎಸ್‌ಕೆಆರ್ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಂಸ್ಥೆ ಅಧ್ಯಕ್ಷ ಶ್ರೀನಿವಾಸರಾವ್ ಕಲ್ಯಾಣಿ ಬುಧವಾರ ಉದ್ಘಾಟಿಸಿದರು. ಪ್ರಾಚಾರ್ಯ ಪ್ರೊ.ಶಿವಾನಂದ ಮೇಟಿ ಇತರರಿದ್ದರು.
ಗಂಗಾವತಿ: ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಸಾಧನೆ ಮಾಡಿ ಎಂದು ಎಸ್‌ಕೆಆರ್ ಪಿಯು ಕಾಲೇಜಿನ ಪ್ರಾಚಾರ್ಯ ಪ್ರೊ.ಶಿವಾನಂದ ಮೇಟಿ ಸಲಹೆ ನೀಡಿದರು.
ನಗರದ ಉಳ್ಳಿಡಗ್ಗಿಯ ಎಸ್‌ಕೆಆರ್ ಪಿಯು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣ ಎನ್ನುವುದು ಕೇವಲ ಪರೀಕ್ಷೆಗಾಗಿ ಇರಬಾರದು. ಅದು ಜೀವನದ ನೈತಿಕ ವಿಕಸನಕ್ಕೆ ದಾರಿಯಾಗಬೇಕು. ಪ್ರತಿಭಾ ಪರೀಕ್ಷೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹೊರತರಲು ಮತ್ತು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು.
ಸಂಸ್ಥೆ ಅಧ್ಯಕ್ಷ ಶ್ರೀನಿವಾಸರಾವ್ ಕಲ್ಯಾಣಿ ಮಾತನಾಡಿ, ವಿದ್ಯಾರ್ಥಿಗಳು ಮಾದರಿ ನಾಗರಿಕರಾಗಲು ಸರಿಯಾದ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯದರ್ಶಿ ರಾಮಮೋಹನ್, ಸದಸ್ಯ ಯಶ್ವಂತ್ ಕೆಂಧೋಳೆ, ಮುಖ್ಯಶಿಕ್ಷಕ ಮದ್ದಾನಪ್ಪ, ಪ್ರತಿಭಾ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 25 ವಿದ್ಯಾರ್ಥಿಗಳಿಗೆ ಬಹುಮಾನ, ಗಣಿತ ಮತ್ತು ವಿಜ್ಞಾನ ವಿಷಯಗಳ ಸಂಪನ್ಮೂಲ ಪುಸ್ತಕ ವಿತರಿಸಲಾಯಿತು.