ಕೊಪ್ಪಳದಲ್ಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕ ಸಂಟನೆಗಳ ಸಮನ್ವಯ ಸಮಿತಿಯಿಂದ ಜಿಲ್ಲಾ ಚುನಾವಣಾ ವಿಭಾಗದ ತಹಸೀಲ್ದಾರ್ ರವಿಕುವಾರ್ ವಸದಗೆ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಕಾಸಿಂ ಸರ್ದಾರ್, ತುಕಾರಾಂ ಪಾತ್ರೋಟಿ, ಶರಣು ಗಡ್ಡಿ, ಬಸವರಾಜ್ ಶೀಲವಂತರ್, ಎಸ್.ಎ.ಗಫಾರ್ ಇದ್ದರು. 
ಕೊಪ್ಪಳ

ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಲಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್‌ಗೆ ಕಟ್ಟಡ ಕಾರ್ಮಿಕ ಸಂಟನೆಗಳ ಸಮನ್ವಯ ಸಮಿತಿ ಮನವಿ
  • ಎಕ್ಸಿಕ್ಯೂಟಿವ್ ಅಧಿಕಾರಿ ಹೇಮಂತ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹ
ಕೊಪ್ಪಳ: ಕಟ್ಟಡ ಕಾರ್ಮಿಕರ ವಿವಿಧ ಕಲ್ಯಾಣ ಸೌಲಭ್ಯಗಳ ವಿಳಂಬ ವಿಲೇವಾರಿ, ಬಾಕಿ ಶೈಕ್ಷಣಿಕ ಸಹಾಯಧನ ಬಿಡುಗಡೆ, ಕಿಟ್ ಖರೀದಿಯಲ್ಲಿನ ಅವ್ಯವಹಾರಗಳ ತನಿಖೆ ಹಾಗೂ ಜಿಲ್ಲಾ ಎಕ್ಸಿಕ್ಯೂಟಿವ್ ಅಧಿಕಾರಿ ಹೇಮಂತ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕ ಸಂಟನೆಗಳ ಸಮನ್ವಯ ಸಮಿತಿಯಿಂದ ಜಿಲ್ಲಾ ಚುನಾವಣಾ ವಿಭಾಗದ ತಹಸೀಲ್ದಾರ್ ರವಿಕುವಾರ್ ವಸದ ಮೂಲಕ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಸಾವಿರಾರು ಕಟ್ಟಡ ಕಾರ್ಮಿಕರ ವೈದ್ಯಕೀಯ ನೆರವು, ಮದುವೆ ಸಹಾಯಧನ, ಹೆರಿಗೆ ಭತ್ಯೆ, ಪಿಂಚಣಿ, ಮರಣ ಪರಿಹಾರ ಹಾಗೂ ಶೈಕ್ಷಣಿಕ ಸಹಾಯಧನ ಸೇರಿ ವಿವಿಧ ಯೋಜನೆಗಳ ಅರ್ಜಿಗಳು ದೀರ್ಕಾಲದಿಂದ ಬಾಕಿ ಉಳಿದಿದ್ದು, ಫಲಾನುಭವಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೈಕೋರ್ಟ್ ಆದೇಶದಂತೆ ಕಾರ್ಮಿಕರಿಗೆ ನೇರ ಹಣ ವರ್ಗಾವಣೆ ಮೂಲಕ ನೆರವು ನೀಡುವ ಬದಲು ಕೋಟ್ಯಂತರ ರೂ. ವೆಚ್ಚದಲ್ಲಿ ವಿವಿಧ ಕಿಟ್ ಖರೀದಿಸಲಾಗುತ್ತಿದೆ ಎಂದು ದೂರಿದರು.
ಇತ್ತೀಚಿನ ಸೇಫ್ಟಿ ಕಿಟ್ ವಿತರಣೆಯಲ್ಲಿ ಕಾರ್ಮಿಕರ ವಾಹಿತಿ ಸಂಗ್ರಹಿಸಿ ಸಂಟನೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶೈಕ್ಷಣಿಕ ಸಹಾಯಧನ ಹಾಗೂ ಪ್ರತಿಭಾ ಪುರಸ್ಕಾರ ಮೊತ್ತವನ್ನು ತಕ್ಷಣ ಬಿಡುಗಡೆ ವಾಡಬೇಕು. ಬಾಕಿ ಇರುವ ವಿವಿಧ ಕಲ್ಯಾಣ ಯೋಜನೆಗಳ ಅರ್ಜಿಗಳನ್ನು ಶ್ರೀ ವಿಲೇವಾರಿ ವಾಡಬೇಕು. ಕಾರ್ಮಿಕರ ಹೆಸರಿನಲ್ಲಿ ನಡೆಯುತ್ತಿರುವ ಕಿಟ್ ಖರೀದಿ ಕುರಿತು ಸಮಗ್ರ ತನಿಖೆ ನಡೆಸಬೇಕು. 15 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.'
ಪ್ರಮುಖರಾದ ಕಾಸಿಂ ಸರ್ದಾರ್, ತುಕಾರಾಂ ಪಾತ್ರೋಟಿ, ಶರಣು ಗಡ್ಡಿ, ಬಸವರಾಜ್ ಶೀಲವಂತರ್, ಎಸ್.ಎ.ಗಫಾರ್, ಮಹದೇವಪ್ಪ ವಾವಿನಮಡು, ಗಾಳೆಪ್ಪ ಮುಂಗೋಲಿ, ಮಖಬೂಲ್ ರಾಯಚೂರು ಇತರರಿದ್ದರು.