ತಾವರಗೇರಾದ ಕೆಇಬಿ ಮುಂದೆ ರೈತರು ಧರಣಿ ನಡೆಸಿದರು. ಗ್ರಾಪಂ ಮಾಜಿ ಅಧ್ಯಕ್ಷ ವೀರಭದ್ರಪ್ಪ ನಾಲತವಾಡ, ಪ್ರಮುಖರಾದ ಚಂದ್ರಶೇಖರ ನಾಲತವಾಡ, ವಕೀಲ ಕಳಕನಗೌಡ, ಶಾಮಣ್ಣ ಸುಣಗಾರ ಇತರರಿದ್ದರು. 
ಕೊಪ್ಪಳ

ವಿದ್ಯುತ್ ಸಮರ್ಪಕವಾಗಿ ಪೂರೈಸಲಿ

ಪ್ರಮುಖ ಮುಖ್ಯಾಂಶಗಳು

  • ರೈತರು ಧರಣಿ
ತಾವರಗೇರಾ: ಸುತ್ತಲಿನ ಗ್ರಾಮಗಳ ರೈತರ ಜಮೀನುಗಳ ಪಂಪ್‌ಸೆಟ್‌ಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರಿಂದ ಕೃಷಿ ಕಾರ್ಯಗಳಿಗೆ ತೊಂದರೆಯಾಗುತ್ತಿದ್ದು. ವಿದ್ಯುತ್ ಸಮರ್ಪಕವಾಗಿ ಪೂರೈಸಿ ಎಂದು ಒತ್ತಾಯಿಸಿ ಕೆಇಬಿ ಮುಂದೆ ಸೋಮವಾರ ರೈತರು ಧರಣಿ ನಡೆಸಿದರು.
ಈಗಾಗಲೇ ರೈತರು ಮಳೆ ಇಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. ಪಂಪ್‌ಸೆಟ್ ಹೊಂದಿರುವ ರೈತರು ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರಿಲ್ಲದೆ ಬಾಡಿ ಹೋಗುತ್ತಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ. ತಾವರಗೇರಾದ 110 ಕೆವಿ ಸ್ಟೇಷನ್ ಕಾಮಗಾರಿ ಫೀಡರನ್ನು ಸರಿಪಡಿಸದಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.
ಮೇಣೇಧಾಳಿಗೆ ಮಂಜೂರಾಗಿರುವ ಸ್ಟೇಷನ್ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು. ಇಲ್ಲದಿದ್ದರೆ ಹೋಬಳಿ ವ್ಯಾಪ್ತಿ ರೈತರಿಗೆ ನಷ್ಟ ಉಂಟಾಗಲಿದೆ. ಆದ್ದರಿಂದ ತಕ್ಷಣ ಕಾಮಗಾರಿ ಕೈಗೊಂಡು ಸಮರ್ಪಕ ವಿದ್ಯುತ್ ಪೂರೈಸಬೇಕು. ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡು ರೈತರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಜೆಸ್ಕಾಂ ಎಇಇ ಕೆಂಚಪ್ಪ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಗ್ರಾಪಂ ಮಾಜಿ ಅಧ್ಯಕ್ಷ ವೀರಭದ್ರಪ್ಪ ನಾಲತವಾಡ, ಪ್ರಮುಖರಾದ ಚಂದ್ರಶೇಖರ ನಾಲಯವಾಡ, ವಕೀಲ ಕಳಕನಗೌಡ, ಶಾಮಣ್ಣ ಸುಣಗಾರ ಇತರರಿದ್ದರು.