ವಿಶ್ವಮಾನವ ದಿನಾಚರಣೆ ಅಂಗವಾಗಿ ಶುಕ್ರವಾರ ಕೊಪ್ಪಳದಲ್ಲಿ ಎಡಿಸಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು, ಡಿಡಿಪಿಯು ಜಗದೀಶ ಜಿ.ಎಚ್., ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಂದಾರ ಇದ್ದರು.
- ಎಡಿಸಿ ಸಿದ್ರಾಮೇಶ್ವರ ಹೇಳಿಕೆ
ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡಿ.29ರಂದು ವಿಶ್ವ ಮಾನವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನವಾಗಿ ಆಚರಿಸಲಾಗುವುದು. ಕುವೆಂಪು ತಮ್ಮ ಸಾಹಿತ್ಯದ ಮೂಲಕ ಕನ್ನಡ ನಾಡಿನ ಕಂಪನ್ನು ವಿಶ್ವದೆಲ್ಲೆಡೆ ಪಸರಿಸಿದರು. ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಡಿ.29ರಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಇರಲಿದೆ. ಪದವಿ ವಿದ್ಯಾರ್ಥಿಗಳು ಭಾಗಿಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಿ. ಅರ್ಥಪೂರ್ಣ ಆಚರಣೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ. ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಕೆ, ವಿಶೇಷ ಉಪನ್ಯಾಸ, ಕುವೆಂಪು ಗೀತ ಗಾಯನ ಆಯೋಜಿಸಲಾಗುವುದು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಡಿಡಿಪಿಯು ಜಗದೀಶ ಜಿ.ಎಚ್., ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಂದಾರ, ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ, ಪುಷ್ಪಲತಾ ಎಳುಬಾವಿ ಇತರರಿದ್ದರು.