ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಹಾಗೂ ಒಂದೇ ಮಾತರಂ ಗೀತೆಯ 150 ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿದರು. ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಸಂತೋಷಿಯಾ ಜೋಶಿ, ಬಿಜೆಪಿ ಹಿರಿಯ ಮುಖಂಡ ಬಸವಲಿಂಗಪ್ಪ ಭೂತೆ, ಕೊಪ್ಪಳ ಹಾಗೂ ಬಳ್ಳಾರಿ ವಿಭಾಗದ ಹಿಂದು ಸೇವಾ ಪ್ರತಿಷ್ಠಾನ ಸಂಚಾಲಕ ಭೀಮರಾವ್ ದೇಶಪಾಂಡೆ ಇತರರಿದ್ದರು.
- ಪ್ರತಿಯೊಬ್ಬರೂ
- ಸ್ವದೇಶಿ
- ವಸ್ತು
ಯಲಬುರ್ಗಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನೆಡೆಸುವ ಮೂಲಕ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿದ್ದಾರೆ ಎಂದು ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಹೇಳಿದರು.
ಪಟ್ಟಣದ ಎಸ್.ಎ.ನಿಂಗೋಜಿ ಪ್ರೌಢ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಹಾಗೂ ಒಂದೇ ಮಾತರಂ ಗೀತೆಯ 150 ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ಸ್ವದೇಶಿ ವಸ್ತುಗಳನ್ನು ಖರೀದಿಸಬೇಕು. ಅಂದಾಗ ಮಾತ್ರ ನಮ್ಮ ದೇಶ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದರು.
ಮುಖಂಡರಾದ ಬಸವಲಿಂಗಪ್ಪ ಭೂತೆ, ಶಿವಲೀಲಾ ದಳವಾಯಿ, ಜಿಪಂ ಮಾಜಿ ಸದಸ್ಯ ಶಕುಂತಲಾದೇವಿ ಮಾಲಿ ಪಾಟೀಲ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಅಂಬರೀಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ್, ನ್ಯಾಯವಾದಿ ಅಂಬಿಕಾ ಕುಲಕರ್ಣಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶಪ್ಪ ಕರಮುಡಿ, ಬಿಜೆಪಿ ಎಸ್.ಟಿ.ಮೋರ್ಚಾ ತಾಲೂಕು ಅಧ್ಯಕ್ಷ ದ್ಯಾಮಣ್ಣ ಹುಚ್ಚಲಕುಂಟಾ ಇತರರಿದ್ದರು.