ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಫಾರ್ಮ್ ಹೌಸ್‌ನಲ್ಲಿ ಏರ್ಪಡಿಸಿದ್ದ ವಿಶ್ವಭೂಮಿ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಿಮಿತ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌವಲಗಿ ಬುಧವಾರ ಚಾಲನೆ ನೀಡಿದರು. ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಹನುಮಂತ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಆರ್.ನಾಯಕ್ ಇತರರಿದ್ದರು. 
ಕೊಪ್ಪಳ

ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಿ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಪ್ರತಿಯೊಬ್ಬರೂ
  • ಸಸಿಗಳನ್ನು
  • ಬೆಳೆಸಿ
ಕುಷ್ಟಗಿ: ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರೂ ಸಸಿಗಳನ್ನು ಬೆಳೆಸಿ ಪೋಷಿಸಲು ಮುಂದಾಗಬೇಕು ಎಂದು ನ್ಯಾಯಾಧೀಶ ಮಹಾಂತೇಶ ಚೌವಲಗಿ ಹೇಳಿದರು.
ತಾಲೂಕಿನ ಗುಡಿ ಕಲಕೇರಿ ಫಾರ್ಮ್ ಹೌಸ್ ನರ್ಸರಿ ಆವರಣದಲ್ಲಿ ಆಯೋಜಿಸಿದ್ದ ಅರಣ್ಯ ಇಲಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ವಿಶ್ವಭೂಮಿ ದಿನಾಚರಣೆ ನಿಮಿತ್ತ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು.
ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗಿಡಮರಗಳನ್ನು ಉಳಿಸಿ ಬೆಳೆಸಬೇಕು. ಪ್ರತಿಯೊಬ್ಬರೂ ಮಣ್ಣು ಪರೀಕ್ಷೆ ಮೂಲಕ ಉತ್ತಮ ಬೆಳೆ ಪಡೆಯಲು ಸಾಧ್ಯ. ಪರಿಸರ ನಾಶದಿಂದ ವಾತಾವರಣ ಗಟ್ಟಿಗೊಳಿಸಲು ಸಂಪೂರ್ಣ ವಿಫಲರಾಗುತ್ತಿದ್ದೇವೆ ಎಂದು ತಿಳಿಸಿದರು.