ಲವ್ ಜಿಹಾದ್ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕೊಪ್ಪಳದ ಅಶೋಕ ವೃತ್ತದಲ್ಲಿ ಎಡಿಸಿ ಸಿದ್ರಾಮೇಶ್ವರಗೆ ಮನವಿ ಸಲ್ಲಿಸಿದರು. ಬಜರಂಗದಳ ಪ್ರಾಂತ ವ್ಯವಸ್ಥಾಪಕ ಪುಂಡಲಿಕ ದಳವಾಯಿ, ಜಿಲ್ಲಾಧ್ಯಕ್ಷ ಸಂಗಮೇಶ ಹಿರೇಮಠ, ಜಿಲ್ಲಾ ಸಂಚಾಲಕ ಅರುಣ್ ಹೂಗಾರ, ಪ್ರಮುಖರಾದ ಸುಮಂಗಲಾ ಹಿರೇಮಠ, ಸಿದ್ದು ಭಗತ್ ಇತರರಿದ್ದರು.
ಕೊಪ್ಪಳ: ಲವ್ ಜಿಹಾದ್ ಹಾಗೂ ಸವಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಗುರುವಾರ ನಗರದ ಅಶೋಕ ವೃತ್ತದಲ್ಲಿ ಎಡಿಸಿ ಸಿದ್ರಾಮೇಶ್ವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಮಹಿಳೆಯರ ಶೋಷಣೆ, ಬಲವಂತದ ಮತಾಂತರ ಹಾಗೂ ಬ್ಲಾಕ್‌ಮೇಲ್ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು. ಜಿಮ್‌ಗಳಂತಹ ಸ್ಥಳಗಳಲ್ಲಿ ಮಹಿಳೆಯರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿರುವ ಆರೋಪಗಳ ಕುರಿತು ಕ್ರಮವಹಿಸಬೇಕು.
ಜಿಲ್ಲೆಯ ಅಳವಂಡಿ ಹತ್ತಿರದ ಕಂಪ್ಲಿ ಮುಸ್ತಫಾ ಖಾದ್ರಿ ಎಂಬ ಜಿಹಾದಿಯನ್ನು ಆದಷ್ಟು ಬೇಗ ಬಂಧಿಸಬೇಕು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲವ್ ಜಿಹಾದಿ ಪ್ರಕರಣಗಳು, ಅನೇಕ ಹಿಂದೂ ಹೆಣ್ಣುಮಕ್ಕಳ ಶೋಷಣೆ, ಬಲವಂತದ ಮತಾಂತರ ಒಂದರ ಮೇಲೊಂದು ಹೆಚ್ಚಾಗುತ್ತಿವೆ. ಈ ರೀತಿಯ ಟನೆಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಕ್ರಮ ಭೂ ಅತಿಕ್ರಮಣ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ಕುಟುಂಬಗಳ ಮೇಲೆ ದಾಳಿಗಳಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಮಟ್ಟದಲ್ಲಿ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು. ದೇಶದ ಏಕತೆ ಮತ್ತು ಶಾಂತಿ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು.