ಜಿಲ್ಲಾ ಕೇಂದ್ರದಲ್ಲಿ ಮೇ 01 ರಂದು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಶ್ರೀ ಭಗವಾನ ಬುದ್ಧ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು. 
ಕೊಪ್ಪಳ

ಬುದ್ಧ ಜಯಂತಿಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ

ರವೀಂದ್ರ ರಡ್ಡಿ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಸೂಚನೆ
  • ಪೂರ್ವಭಾವಿ ಸಭೆ
ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ ಮೇ 01 ರಂದು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಶ್ರೀ ಭಗವಾನ ಬುದ್ಧ ಜಯಂತಿಯನ್ನು
ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.
 ಶ್ರೀ ಭಗವಾನ ಬುದ್ಧ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್​-2ರ ಸಭಾಂಗಣದಲ್ಲಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಡಾ. ಬಿ.ಆರ್​. ಅಂಬೇಡ್ಕರ್​ ವೃತ್ತದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶ್ರೀ ಭಗವಾನ ಬುದ್ಧರ ಕುರಿತು ವಿಶೇಫಿ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದ್ದು. ಸಮಾರಂಭ ದಿನದಂದು ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತು ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು.
ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ, ಎಲ್ಲಾ ಕಚೇರಿಗಳಲ್ಲಿ ಹಾಗೂ ಶಾಲಾ ಮತ್ತು ಕಾಲೇಜುಗಳಲ್ಲಿಯೂ ಶ್ರೀ ಭಗವಾನ ಬುದ್ಧ ಜಯಂತಿ ಆಚರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು. 
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್​, ಸಮುದಾಯದ ಮುಖಂಡರಾದ ಯಲ್ಲಪ್ಪ ಬಳಗಾನೂರ, ಸಿದ್ದರಾಮ ಹೊಸಮನಿ, ಅಜಯ ದೊಡ್ಡಮನಿ, ಪಂಪಾಪತಿ ಎಚ್​.ಬಿ. ಶಿವರಾಜ ಛಲವಾದಿ, ಪರುಶುರಾಮ, ಕಾಶೆಪ್ಪ ಚಲವಾದಿ, ಸತೀಶ ಇತರರಿದ್ದರು.