ಕೊಪ್ಪಳದಲ್ಲಿ ಶುಕ್ರವಾರ ಹಮ್ಮಿಕೊಂಡ ಡಾ. ರಾಜ್ಕುಮಾರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸಿದ್ರಾಮೇಶ್ವರ ಮಾತನಾಡಿದರು. ಪ್ರಮುಖರಾದ ಸಾವಿತ್ರಿ ಮುಜಮದಾರ, ಎಸ್.ಆರ್ ಪೂಜಾರ್, ಜಗದೀಶ, ಕರ್ಣಕುಮಾರ್, ಎ.ಬಸವರಾಜ ಇದ್ದರು.
- ಎಡಿಸಿ ಸಿದ್ರಾಮೇಶ್ವರ ಸೂಚನೆ
- ದಿನಾಚರಣೆ ಪೂರ್ವಭಾವಿ ಸಭೆ
ಕೊಪ್ಪಳ : ಕನ್ನಡದ ವರನಟ ಡಾ.ರಾಜಕುಮಾರ್ ಅವರ ಜನ್ಮದಿನಾಚರಣೆಯನ್ನು ನಗರದ ಸಾಹಿತ್ಯ ಭವನದಲ್ಲಿ ಏ.24 ರಂದು ಅದ್ದೂರಿಯಾಗಿ ಆಚರಿಸಲು ನಿರ್ದರಿಸಲಾಗಿದ್ದು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ಡಾ.ರಾಜಕುಮಾರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನಾಡು ಕಂಡ ನೆಚ್ಚಿನ ನಟ. ಗೋಕಾಕ ಚಳವಳಿ ಸೇರಿದಂತೆ ಅನೇಕ ಕನ್ನಡಪರ ಹೋರಾಟಗಳಲ್ಲಿ ಭಾಗಿಯಾಗಿ ನಾಡು-ನುಡಿಗಾಗಿ ಮಹತ್ತರ ಸೇವೆ ಸಲ್ಲಿಸಿದ ಮಹನಿಯ. ತಮ್ಮದೇ ಆದ ವಿಶೇಷ ನಟನೆಯಿಂದ ಕನ್ನಡಿಗರ ಮನೆಮಾತಾಗಿದ್ದಾರೆ. ಅಂತಹ ಮಹನಿಯರ ಜಯಂತಿ ಕಾರ್ಯಕ್ರಮ ಜಿಲ್ಲಾ ಕೇಂದ್ರದಲ್ಲಿ ವಿಶೇಷೇವಾಗಿ ನಡೆಯಬೇಕು. ಇದಕ್ಕಾಗಿ ಜವಾಬ್ದಾರಿ ಹಂಚಿಕೆ ಮಾಡಿದ ಆಯಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಿ, ಡಾ.ರಾಜ್ ಸಂಭ್ರಮ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯುವಂತೆ ವ್ಯವಸ್ಥೆ ಮಾಡಿ ಎಂದು ಸೂಚನೆ ನೀಡಿದರು.
ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸಬೇಕು. ನಗರಸಭೆ ಅಧಿಕಾರಿಗಳು ಸಾಹಿತ್ಯ ಭವನದಲ್ಲಿ ಕುಡಿಯುವ ನೀರು ಮತ್ತು ಶುಚಿತ್ವದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ಅವಧಿಯಲ್ಲಿ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿ. ಕಾರ್ಯಕ್ರಮದಲ್ಲಿ ಹಾಸ್ಟೇಲ್ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಅಗತ್ಯ ಏರ್ಪಾಡು ಮಾಡಲು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜಮದಾರ ಮಾತನಾಡಿ, ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗ ಪಡೆದುಕೊಳ್ಳಬೇಕು. ಕೊಪ್ಪಳ ಜಿಲ್ಲೆಯಲ್ಲಿ ಡಾ.ರಾಜ್ಕುಮಾರ್ ಅಭಿಮಾನಿಗಳ ಪಡೆಯಿದ್ದು ಅವರೆಲ್ಲರೂ ಭಾಗವಹಿಸುತ್ತಾರೆ. ಡಾ.ರಾಜ್ಕುಮಾರ್ ಅಭಿನಯದ ಚಲನಚಿತ್ರಗಳ ಹಾಡುಗಳು ಮತ್ತು ಅವರು ಹಾಡಿರುವ ಗೀತೆಗಳ ಗಾಯನಕ್ಕೆ ಮತ್ತು ಮಿಮಿಕ್ರಿ ಕಾರ್ಯಕ್ರಮಕ್ಕೆ ಅವಕಾಶ ನೀಡಿ ರಾಜ್ ಸಂಭ್ರಮ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಬೇಕೆಂದರು.
ಜಿಪಂ ಸಹಾಯಕ ಕಾರ್ಯದರ್ಶಿ ಎಸ್.ಆರ್ ಪೂಜಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಸಮಾಜ ಕಲ್ಯಾಣ ಇಲಾಖೆ ಲೆಕ್ಕ ಅಧಿಕ್ಷಕ ಎ.ಆಂಜನೇಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಉಷಾ ಮುಜುಮ್ದಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಪರ ಹೋರಾಟಗಾರರಾದ ಮಹಾಂತೇಶ ಕೊತಬಾಳ ಇತರರಿದ್ದರು.
ರಾಜ್ ಸಂಭ್ರಮ ಸಾಮಾನ್ಯರಿಗೂ ಅವಕಾಶ
ಜಿಲ್ಲಾ ಕೇಂದ್ರದಲ್ಲಿ ಏ. 24ರಂದು ನಗರದ ಸಾಹಿತ್ಯ ಭವನದಲ್ಲಿ ಆಯೋಜನೆ ಮಾಡಲಾದ ವರನಟ ಡಾ.ರಾಜಕುಮಾರ ಜನ್ಮದಿನಾಚರಣೆಯ ಡಾ.ರಾಜ್ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಅಭಿನಯ ಚಲನಚಿತ್ರ ಗೀತೆಗಳನ್ನು ಹಾಡಲು, ಸಿನಿಮಾ ಡೈಲಾಗ್ (ಮಿಮಿಕ್ರಿ) ಹೇಳಲು ಆಸಕ್ತ ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರೋಕೆ ಹಾಡುಗಾರರಿಗೆ ಆದ್ಯತೆ ನೀಡಲಾಗುವುದು. ಡಾ.ರಾಜಕುಮಾರ ಅಭಿಮಾನಿಗಳು ಯಾರೇ ಇದ್ದರೂ ಎಲ್ಲರಿಗೂ ಅವಕಾಶವಿದ್ದು, ವಯಸ್ಸಿನ ಮಿತಿ ಇರುವುದಿಲ್ಲ. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶವಿದ್ದು, ತಮ್ಮ ಹೆಸರು ಮತ್ತು ಪೂರ್ಣವಿಳಾಸವನ್ನು ಏ. 20ರೊಳಗೆ ವಾರ್ತಾ ಇಲಾಖೆಯಲ್ಲಿ ಹೆಸರನ್ನು ನೋಂದಾಯಿಸಬೇಕು. ಕಾರ್ಯಮಕ್ಕೆ ಸ್ವಂತ ಖರ್ಚಿನಲ್ಲೇ ಬರತಕ್ಕದ್ದು. ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರವನ್ನು ಮಾತ್ರ ಗೌರವವಾಗಿ ಕೊಡಲಾಗುತ್ತದೆ. ಆಸಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಸಂಪರ್ಕಿಸಿ.