ಕೊಪ್ಪಳದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ವಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡುರ, ಡಿಡಿಪಿಯು ಜಗದೀಶ, ಡಿಡಿಪಿಐ ಸೋಮಶೇಖರಗೌಡ ಪಾಟೀಲ್ ಇದ್ದರು. 
ಕೊಪ್ಪಳ

ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಸೂಚನೆ
  • ಪೂರ್ವಭಾವಿ
  • ಸಭೆ

ಕೊಪ್ಪಳ:

ಆ.15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣ ಹಾಗೂ ಶಿಸ್ತಿನಿಂದ ಆಚರಿಸಲು ಎಲ್ಲ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ವಾತನಾಡಿದರು.
ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದ್ದು, ಎಲ್ಲ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮವನ್ನು ಸರ್ಕಾರದ ಶಿಷ್ಠಾಚಾರದಂತೆ ಯಾವುದೇ ಲೋಪವಿಲ್ಲದೆ ಆಯೋಜಿಸುವಂತೆ ನಿರ್ದೇಶಿಸಿದರು.
ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಸ್ವಚ್ಛತೆ, ಅಲಂಕಾರ, ಕ್ರೀಡಾಂಗಣದಲ್ಲಿ ಕುಡಿವ ನೀರಿನ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನ, ಪಥಸಂಚಲನದಲ್ಲಿ ಪೌರಕಾರ್ಮಿಕರ ತಂಡದ ಭಾಗವಹಿಸುವಿಕೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧಿತ ಇಲಾಖೆಗಳು ಕೈಗೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಬಿಂಬಿಸುವ ಪ್ರದರ್ಶನಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ವಾತನಾಡಿ, ಪಥಸಂಚಲನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಹಾಗೂ ಹಾಲು ಅಥವಾ ಲು ಉಪಹಾರದ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ವಾತನಾಡಿ, ಪಥಸಂಚಲನ ಶಿಸ್ತುಬದ್ಧವಾಗಿರಬೇಕು. ಪ್ಲಾಸ್ಟಿಕ್ ಧ್ವಜಗಳ ವಾರಾಟವನ್ನು ಸಂಪೂರ್ಣವಾಗಿ ತಡೆಯಲು ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ವಾತನಾಡಿ, ವಿವಿಧ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸ್ವಾತಂತ್ರ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡುರ, ಡಿಡಿಪಿಯು ಜಗದೀಶ, ಡಿಡಿಪಿಐ ಸೋಮಶೇಖರಗೌಡ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ್, ತಾಪಂ ಇಒ ದುಂಡಪ್ಪ ತುರಾದಿ ಇತರರಿದ್ದರು.