ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ನಡೆಯಿತು. ಡಾ.ರಾಜೇಂದ್ರಪ್ರಸಾದ್,ಆಪ್ತ ಸಮಾಲೋಚಕ ಅರುಣಕುಮಾರ ಹಿರೇಮಠ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶಂಕ್ರಮ್ಮ, ಸಮುದಾಯ ಕೇಂದ್ರದ ಆರೋಗ್ಯಾಧಿಕಾರಿ ಸೀತಾ ಪಾಟೀಲ, ಲಕ್ಷ್ಮೀ, ಹೇಮಲತಾ, ಆಶಾ ಕಾರ್ಯಕರ್ತೆ ಗಾಯತ್ರಿ, ತಾಯಮ್ಮ ಇತರರು ಇದ್ದರು.
ತಾವರಗೇರಾ: ಮಹಿಳೆಯರ ಗರ್ಭ ಕಂಠದ ಕ್ಯಾನ್ಸ ರ್ ತಡೆಗಟ್ಟಲು ಎಚ್‌ವಿಪಿ ವ್ಯಾಕ್ಸಿನ್ ಮಹತ್ವದ್ದಾಗಿದೆ ಎಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಹೇಳಿದರು.
ಸ್ಥಳೀಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನ ಜಂಟಿ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಚ್‌ಪಿವಿ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
14ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳು ಸೂಕ್ತ ಗುರುತಿನ ಚೀಟಿ ತೋರಿಸಿ, ಜಿಲ್ಲೆಯ ಯಾವದೇ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಬಹುದು ಎಂದರು. 50 ವಿದ್ಯಾರ್ಥಿನಿಯರಿಗೆ ಎಚ್‌ಪಿವಿ ಲಸಿಕೆ ಹಾಕಲಾಯಿತು.