ಗಂಗಾವತಿ ಎಐಸಿಸಿಟಿಯು ಕಚೇರಿಯಲ್ಲಿ ಆಯೋಜಿಸಿದ್ದ ಬೀದಿ ಬದಿಯ ವ್ಯಾಪಾರಿಗಳು ಮತ್ತು ವಿವಿಧ ಸಂಘಟನೆಗಳ ಸಭೆಯಲ್ಲಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ ದೊರೆರಾಜು ಮಂಗಳವಾರ ಮಾತನಾಡಿದರು. ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ರಾಜ್ಯಾಧಕ್ಷೆ ನಿರ್ಮಲಾ ಬೆಂಗಳೂರು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಕೃಷ್ಣನಾಯಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ, ಎಐಸಿಸಿಟಿಯು ಜಿಲ್ಲಾ ಉಪಾಧ್ಯಕ್ಷ ಸಣ್ಣ ಹನುಮಂತಪ್ಪ ಹುಲಿಹೈದರ್ ಇತರರಿದ್ದರು.
- ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ ದೊರೆರಾಜು ಹೇಳಿಕೆ
ಗಂಗಾವತಿ: ಅಭಿವೃದ್ಧಿ ನೆಪದಲ್ಲಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿದ್ದು, ವ್ಯಾಪಾರಿಗಳ ಜೀವನ ಸಂರಕ್ಷಣೆ ಕಾಯ್ದೆ ಉಲ್ಲಂಸಿದ್ದಾರೆ ಎಂದು ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ ದೊರೆರಾಜು ಹೇಳಿದರು.
ನಗರದ ಎಐಸಿಸಿಟಿಯು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಬೀದಿ ಬದಿ ವ್ಯಾಪಾರಿಗಳು ಮತ್ತು ವಿವಿಧ ಸಂಘಟನೆಗಳ ಸಭೆಯಲ್ಲಿ ಮಾತನಾಡಿದರು. ುಟ್‌ಪಾತ್ ತೆರವು ಕಾರ್ಯಾಚರಣೆ ನೆಪದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ನೀಡಲಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಿಲ್ಲ. ದುಡಿಮೆ ನಂಬಿಕೊಂಡ ವ್ಯಾಪಾರಿಗಳಿಗೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದು, ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದರು.
ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ನಿರ್ಮಲಾ ಬೆಂಗಳೂರು ಮಾತನಾಡಿ, ನಗರದ ಜನತೆಗೆ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಮಹಿಳಾ ಸಾರ್ವಜನಿಕ ಶೌಚಗೃಹಗಳಿಲ್ಲ. ಮೂಲ ಸೌಕರ್ಯದ ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ ಎಂದು ದೂರಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಕೃಷ್ಣನಾಯಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಡಗ್ಗಿ ಮಾತನಾಡಿದರು.
ಎಐಸಿಸಿಟಿಯು ಜಿಲ್ಲಾ ಉಪಾಧ್ಯಕ್ಷ ಸಣ್ಣ ಹನುಮಂತಪ್ಪ ಹುಲಿಹೈದರ್, ಎಸ್‌ಎ್ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಸೈಯದ್ ಬರಾಹುದ್ದೀನ್, ರೇಣುಕಮ್ಮ, ದ್ಯಾವಮ್ಮ, ಶಾಮೀದ್, ಶಫಿ ಇತರರಿದ್ದರು.