ಕೊಪ್ಪಳ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಗ್ಯಾಸ್ ಸಿಲಿಂಡರ್ ಪೂರೈಕೆ ಕುರಿತು ಚರ್ಚಿಸಲು ಆಹಾರ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ವಾತನಾಡಿದರು. ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಎಎಸ್ಪಿ ಆರ್. ಹೇಮಂತ್ ಕುವಾರ, ಎಸಿ ಮಹೇಶ್ ವಾಲಗಿತ್ತಿ, ನಾನಾ ಇಲಾಖೆ ಅಧಿಕಾರಿಗಳಾದ ವಿಶ್ವನಾಥ್, ಅಜ್ಜಪ್ಪ ಸೊಗಲದ, ಅಜ್ಮೀರ ಅಲಿ, ಶರಣಪ್ಪ ಇದ್ದರು. 
ಕೊಪ್ಪಳ

ಅಡುಗೆ ಅನಿಲ ಪೂರೈಕೆಗಿಲ್ಲ ತೊಂದರೆ

ಶಾಮಸುಂದರ್ ಕೊಪ್ಪಳಕರ್

ಪ್ರಮುಖ ಮುಖ್ಯಾಂಶಗಳು

  • ಡಿಸಿ ಸುರೇಶ ಇಟ್ನಾಳ ಸ್ಪಷ್ಟನೆ
  • ಸಿಲಿಂಡರ್ ವಿತರಣೆ ಕುರಿತು ಸಭೆ
ಕೊಪ್ಪಳ: ಜಿಲ್ಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಡಿಸಿ ಡಾ. ಸುರೇಶ ಇಟ್ನಾಳ ಹೇಳಿದರು.
ಕೊಪ್ಪಳ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಗ್ಯಾಸ್ ಸಿಲಿಂಡರ್ ಪೂರೈಕೆ ಮತ್ತು ವಿತರಣೆಯಲ್ಲಿ ಉಂಟಾಗಿರುವ ಅಥವಾ ಉಂಟಾಗಬಹುದಾದ ಪರಿಸ್ಥಿತಿ ಕುರಿತು ಚರ್ಚಿಸಲು ಆಹಾರ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ವಾತನಾಡಿದರು.
ಇತ್ತೀಚೆಗೆ ಜನರು ಆತಂಕದಿಂದ ಅತಿಯಾಗಿ ಗ್ಯಾಸ್ ಬುಕಿಂಗ್ ವಾಡುತ್ತಿದ್ದು, ಇದರಿಂದಾಗಿ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ. ಜಿಲ್ಲೆಯಲ್ಲಿ ವಿವಿಧ ಏಜೆನ್ಸಿಗಳಿದ್ದು, ದಾಸ್ತಾನು ಲಭ್ಯವಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು. ಆದರೆ ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿರುವುದಿಲ್ಲ. ಅಡುಗೆ ಅನಿಲ ಸಿಲಿಂಡರ್ ಬುಕ್ ವಾಡಿದ 25 ದಿನದೊಳಗೆ ವಿತರಣೆ ವಾಡಲಾಗುತ್ತದೆ. ಅಡುಗೆ ಸಿಲಿಂಡರ್ ವಿತರಣೆ ವೇಳೆ ಬಿಲ್ ಮೊತ್ತಕ್ಕಿಂತ ಹೆಚ್ಚು ಹಣ ತೆಗೆದುಕೊಂಡಲ್ಲಿ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲಿಸಿ, ಲೈಸನ್ಸ್ ರದ್ದು ಗೊಳಿಸಲಾಗುತ್ತದೆ ಎಂದು ಗ್ಯಾಸ್ ಏಜೆನ್ಸಿಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.
ಹೋಟೆಲ್‌ಗಳಲ್ಲಿ ಗ್ಯಾಸ್ ಹೊರತಾಗಿ ಸೋಲಾರ್ ಬಳಕೆ, ಬಯೋಗ್ಯಾಸ್ ಬಳಕೆ ವಾಡಬೇಕು. ಖಾಸಗಿ ಕಂಪನಿಗಳು ಗ್ಯಾಸ್ ಬಳಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಇದರ ಬದಲಿಗೆ ಸೋಲಾರ್ ಇತರ ಪರ್ಯಾಯ ವ್ಯವಸ್ಥೆ ವಾಡಿಕೊಳ್ಳುವಂತೆ ತಿಳಿಸಬೇಕು. ಅಗತ್ಯಕ್ಕೆ ತಕ್ಕಂತೆ ಅಡುಗೆ ಅನಿಲ ಬಳಕೆ ವಾಡಿ. ಯಾವುದೇ ರೀತಿಯ ಗ್ಯಾಸ್ ವೇಸ್ಟ್ ವಾಡದಂತೆ ಜನರಿಗೆ ಅರಿವು ಮೂಡಿಸಿ. ಆಸ್ಪತ್ರೆ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಅನಿಲ ಪೂರೈಕೆಗೆ ಮೊದಲ ಆದ್ಯತೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಎಎಸ್ಪಿ ಆರ್. ಹೇಮಂತ್ ಕುವಾರ, ಎಸಿ ಮಹೇಶ್ ವಾಲಗಿತ್ತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿ ವಿಶ್ವನಾಥ್, ಸವಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ವಿವಿಧ ಇಲಾಖೆ ಅಧಿಕಾರಿಗಳಾದ ಶರಣಪ್ಪ, ಕನಕಗಿರಿ ತಾಲೂಕು ಸಿಡಿಪಿಒ ವಿರೂಪಾಕ್ಷಿ ಹಾಗೂ ಐಒಸಿ, ಬಿಪಿಸಿ, ಎಚ್.ಪಿ.ಸಿ. ಗ್ಯಾಸ್ ಕಂಪನಿ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿ ವಾಲೀಕರಿದ್ದರು.