ಕೊಪ್ಪಳದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಡಿಸಿ ಡಾ.ಸುರೇಶ ಬಿ. ಇಟ್ನಾಳ ಮತ್ತು ಸಿಇಓ ವರ್ಣಿತ್​ ನೇಗಿ ಉದ್ಘಾಟಿಸಿದರು. ನಿವೃತ್ತ ಜಂಟಿ ನಿರ್ದೆಶಕ ಶ್ರೀನಿವಾಸ, ಹಾವೇರಿ ವಿಶ್ವವಿದ್ಯಾಲಯ ಕುಲಸಚಿವ ಪ್ರೋ.ಎಸ್​.ಟಿ ಬಾಗಲಕೋಟಿ, ಧಾರವಾಡ ವಿವಿ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರೋ.ಎಚ್​.ಎಚ್​. ಭರಡಿ ಇದ್ದರು. 
ಕೊಪ್ಪಳ

ಅಧಿಕಾರಿಗಳು ನಿಖರ ಮಾಹಿತಿ ನೀಡಿ

ಪ್ರಮುಖ ಮುಖ್ಯಾಂಶಗಳು

  • ಡಿಸಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ
  • ಅಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರ
ಕೊಪ್ಪಳ: ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-&2031 ವರದಿಯನ್ನು ತಯಾರಿಸುವ ಸಂಬಂಧ ಸಂಪನ್ಮೂಲ ವ್ಯಕ್ತಿಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕೆಂದು ಡಿಸಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಜಿಲ್ಲಾ ಪಂಚಾಯತನ ಜೆ.ಎಚ್​. ಪಟೇಲ್​ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
 ರಾಜ್ಯದಲ್ಲಿ 1999 ರಿಂದ ಈ ವರದಿಯನ್ನು ತಯಾರಿಸಲಾಗುತ್ತದೆ. 2015ರ ವರದಿಯನ್ನು 2025ಕ್ಕೆ ಹೋಲಿಕೆ ಮಾಡಲಾಗುತ್ತದೆ. ಇದರಿಂದ ಶಿಕ್ಷಣ, ಆರೋಗ್ಯ, ಸೇರಿದಂತೆ ಜನರ ಜೀವನ ಮಟ್ಟ ತಿಳಿಯುತ್ತದೆ. 2022ರ ವರದಿ ಪ್ರಕಾರ ಜಿಲ್ಲೆಗಳ ಬಡತನ ಪಟ್ಟಿ ತೆಗೆದುಕೊಂಡರೆ ಜಿಲ್ಲೆಯ ಹೆಸರು ಇದೆ. ನಮ್ಮ ವರದಿಗಳು ಜಿಲ್ಲೆ ಅಭಿವೃದ್ಧಿಗೆ ಪೂರಕ ಮತ್ತು ನಿಖರವಾಗಿರಬೇಕು. ಈ ಹಿಂದೆ ಉಡುಪಿ, ವಿಜಯಪುರ ಜಿಲ್ಲೆ ವರದಿಗಳು ರಾಷ್ಟ್ರದಲ್ಲಿ ಸ್ವೀಕೃತಿಯಾಗಿದ್ದವು. ನೀವು ಸರಿಯಾದ ಮಾನದಂಡಗಳ ಪ್ರಕಾರವೇ ಮಾಹಿತಿ ನೀಡಿರಿ ಎಂದರು.
ಜಿಪಂ ಸಿಇಒ ವರ್ಣಿತ್​ ನೇಗಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ತರಬೇತಿ ಕಾರ್ಯಾಗಾರದ ಉದ್ದೇಶ ಜಿಲ್ಲೆಯ ಮಾನವ ಅಭಿವೃದ್ಧಿ ಯೋಜನೆ ತಯಾರಿಸುವ ಬಗ್ಗೆ ಮಾಹಿತಿ ನೀಡುವುದಾಗಿದೆ. ಈ ಕುರಿತು ಸಂಪನ್ಮೂಲ ವ್ಯಕ್ತಿಗಳು ತಮಗೆ ವಿವರವಾದ ಮಾಹಿತಿ ನೀಡಲಿದ್ದಾರೆ. ಅಧಿಕಾರಿಗಳು ಯಾವುದೇ ಸುಳ್ಳು ಮಾಹಿತಿ ನೀಡದೆ. ಸರಿಯಾದ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿವೃತ್ತ ಜಂಟಿ ನಿರ್ದೆಶಕ ಶ್ರೀನಿವಾಸ, ಹಾವೇರಿ ವಿಶ್ವವಿದ್ಯಾಲಯ ಕುಲಸಚಿವ ಪ್ರೋ.ಎಸ್​.ಟಿ ಬಾಗಲಕೋಟಿ, ಧಾರವಾಡ ವಿವಿ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರೋ.ಎಚ್​.ಎಚ್​. ಭರಡಿ ಹಾಗೂ ನರಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ದುರ್ಗೇಶ ಪೂಜಾರ ಅವರು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಯನ್ನು ತಯಾರಿಸುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ  ಯೋಜನಾ ನಿರ್ದೆಶಕ ಮಂಜುನಾಥ ಗುಂಡೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಪಿ.ವೈ.ಶೆಟ್ಟೆಪ್ಪನವರ್​ ಇತರರಿದ್ದರು.