ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವನ್ನು ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಉದ್ಘಾಟಿಸಿದರು. ಪ್ರಾಧ್ಯಾಪಕ ಡಾ. ವೆಂಕಟಗಿರಿ ದಳವಾಯಿ, ಡಾ. ಗಣಪತಿ ಲಮಾಣಿ, ಡಾ. ಹುಲಿಗೆಮ, ಬಿ.ಜಿ. ಕರಿಗಾರ ಇದ್ದರು.
- ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ
ಕೊಪ್ಪಳ : ಸಮಾಜದಲ್ಲಿಂದು ಮುದುಕರು ಅಂಗಳದಲ್ಲಿ ಕಾಲ ಕಳೆಯುತ್ತಿದ್ದರೆ, ಯುವಕರು ಮನೆಗಳಲ್ಲಿ ಮೊಬೈಲ್ಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಹೆಣ್ಣುಮಕ್ಕಳು ಓದಿದರೆ ಒಂದು ಶಾಲೆ ತೆರೆದಂತೆ. ಅಕ್ಷರ ಕಲಿತು ಹೆಣ್ಣುಮಕ್ಕಳು ಕುಟುಂಬವನ್ನು ಬಹಳ ಸರಳವಾಗಿ ನಿರ್ವಹಣೆ ಮಾಡುತ್ತಾರೆ. ಮಹಿಳೆಯರಿಗೆ ಎಲ್ಲ ರಂಗದಲ್ಲಿ ಪ್ರಾಶಾಸ್ತ್ಯ ಸಿಕ್ಕರೆ ದೇಶ ಸುಲಭವಾಗಿ ಅಭಿವೃದ್ಧಿ ಆಗುತ್ತದೆ. ಸಮಾನತೆ ಹೆಸರಲ್ಲಿ ಮಹಿಳೆಯಾರನ್ನು ಶೋಷಣೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಸಾಂಸತಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಬೇಕು ಎಂದು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ವೆಂಕಟಗಿರಿ ದಳವಾಯಿ ಮಾತನಾಡಿ, ಮಹಿಳೆಯರ ಜ್ಞಾನ, ಸಾಮರ್ಥ್ಯ ಮತ್ತು ಧೈರ್ಯವನ್ನು ಸಮಾಜ ಸರಿಯಾಗಿ ಬಳಸಿಕೊಳ್ಳಬೇಕು. ಮಹಿಳೆಯರು ಆರ್ಥಿಕ, ಶೈಕ್ಷಣಿಕ ಹಾಗೂ ಸಾಂಸತಿಕವಾಗಿ ಸಬಲೀಕರಣಗೊಳ್ಳಬೇಕಿದೆ. ಇತಿಹಾಸ ರೂಪಿಸುವ ಪ್ರಕ್ರಿಯೆಯಲ್ಲಿ ಮಹಿಳೆಯರು ಹಾಗೂ ಶೂದ್ರರನ್ನು ಹೊರಗಿಟ್ಟ ಪರಿಣಾಮ ಅವರು ಕಲೆ, ವಿಜ್ಞಾನ ಮತ್ತು ಸಂಸತಿಯಿಂದ ದೂರವಾಗಿದ್ದಾರೆ ಎಂದರು.
ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಹೂ ನೀಡಿ ಬೀಳ್ಕೊಡಲಾಯಿತು. ಕ್ರೀಡೆ, ಸ್ಕೌಟ್ ಮತ್ತು ಗೈಡ್ಸ್ ಹಾಗೂ ವಿವಿಧ ಸಾಂಸತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ. 2024&-25ನೇ ಸಾಲಿನಲ್ಲಿ ಬಿ.ಎಸ್ಸಿ ಭೌತಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಶ್ವೇತಾಳನ್ನು ಸನ್ಮಾನಿಸಲಾಯಿತು.
ಪ್ರಾಚಾರ್ಯ ಡಾ. ಗಣಪತಿ ಲಮಾಣಿ, ಕಾಲೇಜಿನ ಸಾಂಸತಿಕ ಘಟಕದ ಸಂಚಾಲಕಿ ಡಾ. ಹುಲಿಗೆಮ, ಉಪನ್ಯಾಸಕರಾದ ನಾಗರತ್ನ ತಮ್ಮಿನಾಳ, ಡಾ. ಪ್ರದಿಪ್ ಕುಮಾರ, ಡಾ. ನರಸಿಂಹ, ಶುಭ, ಸುಮಿತ್ರ, ಸುಮಯ್ಯ, ಶರಣಪ್ಪ ಮೂಲಿ, ಶಿವಪ್ರಸಾದ್ ಹಾದಿಮನಿ, ಸಂಗಪ್ಪ ಬ್ಯಾಳಿ, ಡಾ. ಪ್ರಕಾಶ ಹುಲ್ಲೂರು, ರುದ್ರವ್ವ ಹಟ್ಟಿಹೊಳಿ, ಶಿಕ್ಷಣ ಪ್ರೇಮಿ ಬಿ.ಜಿ. ಕರಿಗಾರ ಇತರರಿದ್ದರು.