ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಕೊಪ್ಪಳದಲ್ಲಿ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುವಾರ್, ಕಾರ್ಯದರ್ಶಿ ಬಾಲಾಜಿ, ಪದಾಧಿಕಾರಿಗಳಾದ ಹುಸೇನಪ್ಪ ಕೆ., ಬಾಳಪ್ಪ ಹುಲಿಹೈದರ, ರಮೇಶ್ ಬಿ. ಬಸವರಾಜ ಗೋನಾಳ ಇತರರಿದ್ದರು.
- ಶಿಕ್ಷಕನ ವಿರುದ್ಧ ಕ್ರಮಕ್ಕೆ ಎಸ್‌ಎಫ್‌ಐ ಒತ್ತಾಯ
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಗ್ರಾಮವೊಂದರ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಮೋಸ ವಾಡಿದ ಶಿಕ್ಷಕ ಬಸವರಾಜ ಕಟ್ಟಿಮನಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಗುರುವಾರ ಎಸ್ಪಿ ಡಾ. ರಾಮ್. ಎಲ್. ಅರಸಿದ್ದಿಗೆ ಮನವಿ ಸಲ್ಲಿಸಲಾಯಿತು.
ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ವಂಚನೆಗೆ ಒಳಗಾದ ಯುವತಿ ಹಾಗೂ ಕುಟುಂಬದವರಿಗೆ ಬೆದರಿಕೆ ಹಾಕಿ, ಯುವತಿಯೊಂದಿಗೆ ನಡೆದ ಸಂಭಾಷಣೆಗಳನ್ನು ಸಾವಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ವಾನಹಾನಿ ವಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡಲೇ ಶಿಕ್ಷಕ ಬಸವರಾಜ ಕಟ್ಟಿಮನಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಸರ್ಕಾರದಿಂದ ಲಭ್ಯವಿರುವ ಪರಿಹಾರ ನೀಡಬೇಕೆಂದು ಆಗ್ರಹಿಸಲಾಯಿತು.