ಕೊಪ್ಪಳದಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹಿಸಿ ಎಸ್ಎಫ್ಐ ಸಂಟನೆಯಿಂದ ಡಿಸಿ ಡಾ. ಸುರೇಶ ಬಿ. ಇಟ್ನಾಳಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ, ಜಿಲ್ಲಾ ಪದಾಧಿಕಾರಿಗಳಾದ ಯಮನೂರ, ಸಮೀರ್, ನಾಗರಾಜ್, ಮೌನೇಶ್, ವೆಂಕಟೇಶ್, ದೇವರಾಜ್ ಇದ್ದರು.
- ಎಸ್ಎಫ್ಐನಿಂದ ಡಿಸಿಗೆ ಮನವಿ
ಕೊಪ್ಪಳ :ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ ರಚಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಜಿಲ್ಲಾ ಸಮಿತಿ ಗುರವಾರ ಡಿಸಿ ಡಾ. ಸುರೇಶ ಬಿ. ಇಟ್ನಾಳಗೆ ಮನವಿ ಸಲ್ಲಿಸಿತು.
ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶಾತಿ ವೇಳೆ ಹಲವು ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ ಹಾಗೂ 1983ರ ಶಿಕ್ಷಣ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ಡೊನೇಷನ್ ವಸೂಲಿ ಮಾಡುತ್ತಿವೆ. ಬಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇದರಿಂದ ಶಿಕ್ಷಣ ದುಬಾರಿಯಾಗುತ್ತಿದೆ. ಪ್ರವೇಶ ಪರೀಕ್ಷೆ ನಡೆಸುವುದು, ಕಡ್ಡಾಯವಾಗಿ ಶಾಲೆಯಲ್ಲೇ ಬ್ಯಾಗ್, ಪುಸ್ತಕ, ಬೂಟು ಸೇರಿದಂತೆ ಸಾಮಗ್ರಿಗಳನ್ನು ಖರೀದಿಸಲು ಒತ್ತಾಯಿಸುವುದು, ಅನಧಿಕೃತ ಟ್ಯೂಷನ್ ಹಾಗೂ ಸಿಇಟಿ, ನೀಟ್, ಜೆಇಇ ತರಬೇತಿ ಕೇಂದ್ರಗಳನ್ನು ನಡೆಸುವುದು ನಿಯಮ ಉಲ್ಲಂಘನೆಯಾಗಿದೆ ಎಂದು ಎಸ್ಎಫ್ಐ ದೂರಿದೆ.
ಡೊನೇಷನ್ ವಸೂಲಿ ಮಾಡುವ ಸಂಸ್ಥೆಗಳ ವಿರುದ್ಧ ಕ್ರಮ, ಅನಧಿಕೃತ ಟ್ಯೂಷನ್ ಕೇಂದ್ರಗಳನ್ನು ಮುಚ್ಚುವುದು, ಶುಲ್ಕ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವುದು ಹಾಗೂ ಜಿಲ್ಲಾ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ ಸಭೆ ಸೇರಬೇಕು. ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ ರಚಿಸುವ ಕುರಿತು 15 ದಿನಗಳಲ್ಲಿ ಪಾಲಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿ ಸಂಟನೆಗಳ ಸಭೆ ಕರೆಯಬೇಕು ಎಂದು ಆಗ್ರಹಿಸಲಾಯಿತು.
ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ, ಜಿಲ್ಲಾ ಪದಾಧಿಕಾರಿಗಳಾದ ಯಮನೂರ, ಸಮೀರ್, ನಾಗರಾಜ್, ಮೌನೇಶ್, ವೆಂಕಟೇಶ್, ದೇವರಾಜ್ ಇತರರಿದ್ದರು.