ಡಿಸಿ ಕಚೇರಿಯ ಕೆಸ್ವಾನ್-2 ಸಭಾಂಗಣದಲ್ಲಿ ಸೋಮವಾರ ಜಯಂತಿ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಮಾತನಾಡಿದರು. ಸಮುದಾಯದ ಮುಖಂಡ ಮಹೇಂದ್ರ ಚೋಪ್ರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಕೊಪ್ಪಳ: ಜಿಲ್ಲಾಕೇಂದ್ರದಲ್ಲಿ ಮಾರ್ಚ್ 31 ರಂದು ಶ್ರೀ ಭಗವಾನ್ ಮಹಾವೀರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ತಿಳಿಸಿದರು.
ಡಿಸಿ ಕಚೇರಿಯ ಕೆಸ್ವಾನ್-2 ಸಭಾಂಗಣದಲ್ಲಿ ಸೋಮವಾರ ಜಯಂತಿ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ 8:30ಕ್ಕೆ ನಗರದ ಸಾಹಿತ್ಯ ಭವನದಿಂದ ಮಹಾವೀರರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಶ್ರೀ ಮುನಿ ಸೂರತ್ ಜೈನ ಮಂದಿರದವರೆಗೆ ಸಾಗಲಿದೆ. ಬೆಳಗ್ಗೆ 11:30ಕ್ಕೆ ನಗರದ ಎಂಪಿ ಪ್ಯಾಲೇಸ್ನಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಭಗವಾನ್ ಮಹಾವೀರರ ಕುರಿತು ವಿಶೇಷ ಉಪನ್ಯಾಸ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಜಯಂತಿಯ ಯಶಸ್ಸಿಗಾಗಿ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮವು ಯಶಸ್ವಿಯಾಗಲು ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಸಮುದಾಯದ ಮುಖಂಡ ಮಹೇಂದ್ರ ಚೋಪ್ರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.