ಕೊಪ್ಪಳದಲ್ಲಿ ಆಯೋಜಿಸಿದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸಿದ್ರಾಮೇಶ್ವರ ಮಾತನಾಡಿದರು. ಕರ್ಣಕುಮಾರ, ವಿಶ್ವನಾಥಗೌಡ ಎಂ.ಎನ್​., ಮಲ್ಲಿಕಾರ್ಜುನ ಗೌಡರ್​, ಎಎಸ್​ಐ ವೀರಭದ್ರಪ್ಪ ಸಮುದಾಯದ ಪ್ರಮುಖರು ಇದ್ದರು. 
ಕೊಪ್ಪಳ

ಮಹನೀಯರ ಅದ್ಧೂರಿ ಜಯಂತಿಗೆ ಸಿದ್ಧತೆ ಮಾಡಿ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಸಿದ್ರಾಮೇಶ್ವರ ಸೂಚನೆ
ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಏಪ್ರಿಲ್​ 20 ರಂದು ಶ್ರೀ ಬಸವ ಜಯಂತಿ ಹಾಗೂ 21ಕ್ಕೆ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್​ ಸಭಾಂಗಣದಲ್ಲಿ ಮಹನೀಯರ ಜಯಂತಿ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಏ.20ರಂದು ಬೆಳಗ್ಗೆ 8 ಗಂಟೆಗೆ ಅಂಬಿಗರ ಚೌಡಯ್ಯ ನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಹಾಗೂ ಬೆಳಗ್ಗೆ 9 ಗಂಟೆಗೆ ಗಂಜ್​ ಸರ್ಕಲ್​ನಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ನಂತರ ಸಂಜೆ 4 ಗಂಟೆಗೆ ಗಡಿಯಾರ ಕಂಬದ ಬಳಿ ಇರುವ ಮಹೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು. ಅಂದು ಸಂಜೆ 6ಕ್ಕೆ ಗವಿಮಠದ ತೇರು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಏ.21 ರಂದು ಸಂಜೆ 4 ಗಂಟೆಗೆ ಶ್ರೀ ಶಂಕರ ಸಾಂಸತಿಕ ಭವನದಿಂದ ಶ್ರೀ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಸಂಜೆ 6ಕ್ಕೆ ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀ ಶಂಕರ ಸಾಂಸತಿಕ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಎರಡು ಜಯಂತಿಗಳ ದಿನದಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸಿದ್ದತೆಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಮಾಜದ ಬಾಂಧವರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜದ ಬಾಂಧವರು ಕೂಡ ಶಿಷ್ಠಾಚಾರದ ಉಲ್ಲಂಘನೆಯಾಗದಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥಗೌಡ ಎಂ.ಎನ್​., ಡಿಸಿಎಫ್​ ಕಚೇರಿ ಮಲ್ಲಿಕಾರ್ಜುನ ಗೌಡರ್​, ಎಎಸ್​ಐ ವೀರಭದ್ರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಎರಡು ಸಮುದಾಯದ ಪ್ರಮುಖರಾದ ಬಸವರಾಜ ಬಳ್ಳೊಳ್ಳಿ, ಗವಿಸಿದ್ದಪ್ಪ, ಈಶ್ವರಪ್ಪ ತೋಟಪ್ಪ ದಿನ್ನಿ, ಡಿ.ವಿ.ಜೋಶಿ, ರಮೇಶ ಪದಕಿ, ಅಶೋಕ ಪದಕಿ, ರವಿ ಪುರೋಹಿತ, ಬಾಳಂಭಟ್​ ಜೋಶಿ ಇದ್ದರು.