ಹೇರೂರಿನ ಸಿದ್ಧಾರೂಢ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕೇಂದ್ರದಿಂದ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿ ಉಚಿತ ಕಾರ್ಯಾಗಾರವನ್ನು ಗ್ರಾಪಂ ಮಾಜಿ ಅಧ್ಯಕ್ಷ ಹನುಮೇಶಗೌಡ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ಎಸ್.ಬಿ.ವಿಠ್ಠಲ, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಹೇಶ್ವರಿ ಇತರರಿದ್ದರು. 
ಕೊಪ್ಪಳ

ಸಮಾಜಮುಖಿ ಚಟುವಟಿಕೆಗಳಿಗೆ ಆದ್ಯತೆ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಯೋಜನೆ
  • ಸದುಪಯೋಗ
  • ಕಾರ್ಯಕ್ರಮ

ಗಂಗಾವತಿ: ಮಹಿಳಾ ಸ್ವಾವಲಂಬನೆಗೆ ಪೂರಕವಾಗಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವಲಯ ಮೇಲ್ವಿಚಾರಕ ಎಸ್.ಬಿ.ವಿಠ್ಠಲ ಹೇಳಿದರು.

ಹೇರೂರು ಸಿದ್ಧಾರೂಢ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕೇಂದ್ರದಿಂದ ಶನಿವಾರ ಹಮ್ಮಿಕೊಂಡ ಹೊಲಿಗೆ ತರಬೇತಿ ಉಚಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದ್ದು, ಕಾರ್ಯಾಗಾರ ಮೂಲಕ ಅಭಿವೃದ್ಧಿ ಮುಖ್ಯವಾಹಿನಿಗೆ ತರಲಾಗುತ್ತಿದೆ. ಅಂತರ್ಜಲ ವೃದ್ಧಿ ಕಾರ್ಯಕ್ರಮಗಳ ಜತೆಗೆ ಧಾರ್ಮಿಕ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಸಂಸ್ಥೆ ಪ್ರಾಮುಖ್ಯತೆ ನೀಡಿದೆ ಎಂದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಹೇಶ್ವರಿ ಮಾತನಾಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಹನುಮೇಶಗೌಡ, ಒಕ್ಕೂಟದ ಉಪಾಧ್ಯಕ್ಷೆ ಮಂಜಮ್ಮ, ಸೇವಾ ಪ್ರತಿನಿಧಿಗಳಾದ ಬಸಮ್ಮ, ಲತಾ, ಕೈರೂನಬೀ ಇತರರಿದ್ದರು.