ಕೊಪ್ಪಳದಲ್ಲಿ ಇತ್ತೀಚೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಸಂತೋಷ ಕುಮಾರ್ ಅಧಿಕಾರಿಗಳ ಸಭೆ ನಡೆಸಿದರು. ಸದಸ್ಯ ಸತ್ಯನಾರಾಯಣ ಶೆಟ್ಟಿ, ಎಡಿಸಿ ಸಿದ್ರಾಮೇಶ್ವರ, ಡಿಡಿಪಿಯು ಜಗದೀಶ ಜಿ.ಎಚ್., ಸಮಾಜ ಕಲ್ಯಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಇದ್ದರು.
- ಸಂತೋಷ ಕುಮಾರ ಸೂಚನೆ
- ಅಧಿಕಾರಿಗಳೊಂದಿಗೆ ಸಭೆ
ಕೊಪ್ಪಳ : ಮಕ್ಕಳ ಹಕ್ಕುಗಳ ರಕ್ಷಣೆ, ಸುರಕ್ಷತೆ ಹಾಗೂ ಕಲ್ಯಾಣಕ್ಕೆ ಸಂಬಂಧಿತ ಕಾರ್ಯಕ್ರಮ ಅನುಷ್ಠಾನದಲ್ಲಿ
ಸಲ್ಲ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಇತ್ತೀಚೆಗೆ ಜಿಲ್ಲೆಯ ವಿವಿಧ ವಸತಿ ನಿಲಯ, ಶಾಲೆ, ಪೊಲೀಸ್ ಠಾಣೆ, ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಭೇಟಿ ವೇಳೆ ಹಲವು ಲೋಪಗಳು ಕಂಡುಬಂದಿವೆ. ಕೂಡಲೇ ನೂನ್ಯತೆ ಸರಿಪಡಿಸಿ. ಕೈಗೊಂಡ ಕ್ರಮಗಳ ವರದಿ ಆಯೋಗಕ್ಕೆ ಸಲ್ಲಿಸಿ. ಎಲ್ಲ ಇಲಾಖೆಗಳು ಮಕ್ಕಳ ಸುರಕ್ಷತೆ, ಹಕ್ಕುಗಳ ರಕ್ಷಣೆ ಹಾಗೂ ಸಂಬಂಧಿತ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಿ. ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಿ. ಹಾಸ್ಟೆಲ್ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸಿ. ಮಕ್ಕಳ ರಕ್ಷಣಾ ನೀತಿ ಜಾರಿಗೊಳಿಸಿ. ಶಾಲೆ-ಕಾಲೇಜು ಆರಂಭ ಹಾಗೂ ಮುಕ್ತಾಯ ವೇಳೆ ಬೀಟ್ ಪೊಲೀಸರು ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಆಯೋಗ ಸದಸ್ಯ ಸತ್ಯನಾರಾಯಣ ಶೆಟ್ಟಿ, ಎಡಿಸಿ ಸಿದ್ರಾಮೇಶ್ವರ, ಡಿಡಿಪಿಯು ಜಗದೀಶ ಜಿ.ಎಚ್., ಸಮಾಜ ಕಲ್ಯಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ ಹಾವಿನ, ಡಿಡಿಪಿಐ ಸೋಮಶೇಖರಗೌಡ ಪಾಟೀಲ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ಡಿವೈಎಸ್ಪಿ ಮುತ್ತಣ್ಣ ಸರವಗೊಳ ಇತರರಿದ್ದರು.
ಜಿಲ್ಲಾಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಸೇವೆ ಸೂಕ್ತವಾಗಿರಲಿ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸ್ವಚ್ಛತೆ ಜತೆಗೆ ಅಗತ್ಯ ಸೌಲಭ್ಯ ಕಲ್ಪಿಸಿ. ಬಾಣಂತಿಯರಿಗೆ ಬಿಸಿ ನೀರು ನೀಡಿ. ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ವಿಶೇಷ ನಿಗಾವಹಿಸಿ ಚಿಕಿತ್ಸೆ ನೀಡಿ. ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ.
— ಸಂತೋಷ ಕುಮಾರ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ.