ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಐಎಂಎಸ್​ಎಸ್​ ಜಿಲ್ಲಾ ಪದಾಧಿಕಾರಿಗಳು ಕೊಪ್ಪಳದಲ್ಲಿ ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು ಮೂಲಕ ಸರ್ಕಾಕ್ಕೆ ಮನವಿ ಸಲ್ಲಿಸಿದರು. ಎಐಎಂಎಸ್​ಎಸ್​ ಜಿಲ್ಲಾಧ್ಯೆ ಮಂಜುಳಾ ಮಜ್ಜಿಗಿ, ಶಾರದಾ ಹಾಗೂ ವಿದ್ಯಾರ್ಥಿನಿಯರಿದ್ದರು.  
ಕೊಪ್ಪಳ

ಮಹಿಳೆಯರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ರವೀಂದ್ರ ರಡ್ಡಿ

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರ ಸಮಸ್ಯೆಗೆ ನೀಡಿ ಪರಿಹಾರ
  • ಎಐಎಂಎಸ್​ಎಸ್​ ಪದಾಧಿಕಾರಿಳ ಆಗ್ರಹ
ಕೊಪ್ಪಳ: ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳಿಗೆ ಸೂಕ್ತಪರಿಹಾರ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸತಿಕ ಸಂದ ಜಿಲ್ಲಾ ಸಂಚಾಲಕರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ತಡೆಗೆ "ಇವ ನಮ್ಮವ" ಕಾಯ್ದೆ ಜಾರಿಗೊಳಿಸಿದ್ದ ಸ್ವಾಗತಾರ್ಹ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆ ರ್ನಿಬಂಧಿಸಿರುವುದು ಉತ್ತಮ ಕೆಲಸ. ಇದು ಜನಾಭಿಪ್ರಾಯಕ್ಕೆ ಸಂದ ಜಯ. ಈ ಕಾನೂನುಗಳನ್ನು ಪರಿಣಾಮಕಾರಿಯಾಗಿ ತಳಮಟ್ಟಕ್ಕೆ ತಲುಪಿಸಬೇಕು. ಇಂದಿಗೂ ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಹೀಗಿದ್ದರೂ ಸರ್ಕಾರ ಕೆಪಿಎಸ್​ ಹೆಸರಿನಲ್ಲಿ ಗ್ರಾಮೀಣ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆರೋಪಿಸಿದರು.
ತಕ್ಷಣ ಕೆಪಿಎಸ್​ ಯೋಜನೆ ಕೈ ಬಿಡಬೇಕು. ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಖಾತ್ರಿಪಡಿಸಿ. ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಗರ್ಭಧಾರಣೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ. ಶಾಲಾ&ಕಾಲೇಜುಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಎಂದು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನಿವಿ ಸಲ್ಲಿಸಿದರು. ಎಐಎಂಎಸ್​ಎಸ್​ ಜಿಲ್ಲಾಧ್ಯೆ ಮಂಜುಳಾ ಮಜ್ಜಿಗಿ, ಶಾರದಾ ಹಾಗೂ ವಿದ್ಯಾರ್ಥಿನಿಯರಿದ್ದರು.