ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿ ಡಾ. ಸಿದ್ದಯ್ಯ ಪುರಾಣಿಕರ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಪುಷ್ಪಾರ್ಚನೆ ಸಲ್ಲಿಸಿದರು. ಎಂ.ಎಸ್. ದೊಡ್ಡಮನಿ, ಯಮನೂರಪ್ಪ, ಶಂಕರ್ ಇದ್ದರು.
ಕೊಪ್ಪಳ : ಶರಣ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಕನ್ನಡ ಭಾಷೆ ಬೆಳವಣಿಗೆಗೆ ಡಾ. ಸಿದ್ದಯ್ಯ ಪುರಾಣಿಕ್ ಸಲ್ಲಿಸಿರುವ ಕೊಡುಗೆ ಅಪಾರವಾಗಿದ್ದು, ಅವರ ಸಾಹಿತ್ಯಿಕ ಸೇವೆ ಕನ್ನಡ ನಾಡಿಗೆ ಮಾದರಿಯಾಗಿದೆ ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಹೇಳಿದರು.
ನಗರದ ಕನ್ನಡ ಮತ್ತು ಸಂಸತಿ ಇಲಾಖೆ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಹಿರಿಯ ಸಾಹಿತಿ ಡಾ. ಸಿದ್ದಯ್ಯ ಪುರಾಣಿಕರ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕನ್ನಡದ ಕಹಳೆ ಮೊಳಗಿಸಿದ ಪುರಾಣಿಕ್, ಕನ್ನಡ ವಿಶ್ವಕೋಶ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ತಿನ ನಿಘಂಟು ಯೋಜನೆ, ಜೈಮಿನಿ ಭಾರತ ಹಾಗೂ ಹರಿಶ್ಚಂದ್ರ ಕಾವ್ಯ ಪ್ರಕಟಣೆ ಸೇರಿದಂತೆ ಹಲವು ಮಹತ್ವದ ಸಾಹಿತ್ಯಿಕ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಜಿಲ್ಲೆಯಲ್ಲಿ ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ ಸ್ಥಾಪನೆಯಾಗಿದ್ದು, 2026-27ನೇ ಸಾಲಿನಲ್ಲಿ ಅವರ ಸಾಹಿತ್ಯ ಮತ್ತು ಸಂಶೋಧನಾ ಕಾರ್ಯಗಳನ್ನು ಆಧರಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ಎಸ್ ದೊಡ್ಡಮನಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ತಾಲೂಕು ಅಧಿಕಾರಿ ಯಮನೂರಪ್ಪ, ಕನ್ನಡ ಮತ್ತು ಸಂಸತಿ ಇಲಾಖೆ ಸಿಬ್ಬಂದಿ ಶಂಕರ್ ಇತರರಿದ್ದರು.