ಗಂಗಾವತಿ ವಿರುಪಾಪುರ ತಾಂಡಾಕ್ಕೆ ಶಾಸಕ ಗಾಲಿ ಜನಾರ್ದನರೆಡ್ಡಿ ಮಂಗಳವಾರ ಭೇಡಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು. ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಮನೋಹರಗೌಡ ಹೇರೂರು,ಪಾಂಡು ನಾಯ್ಕ, ವೆಂಕಟೇಶ ಜಾಧವ್ ಇತರರಿದ್ದರು.
- ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆ
ಗಂಗಾವತಿ: ನಗರದ ರಾಮಲಿಂಗೇಶ ಕೆರೆ ವ್ಯಾಪ್ತಿಯ ವಿರುಪಾಪುರ ತಾಂಡಾ ಆಶ್ರಯವಾಸಿಗಳ ಪ್ರದೇಶವನ್ನು ಮರು ಸರ್ವೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.
ಕೆರೆ ಒತ್ತುವರಿ ನೆಪದಲ್ಲಿ ವಿರುಪಾಪುರ ತಾಂಡಾದ 230 ಮನೆಗಳ ಮಾಲೀಕರಿಗೆ ಕಂದಾಯ ಇಲಾಖೆ ತೆರವಿನ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಕೆರೆ ಸಂರಕ್ಷಣೆ ವಿಚಾರದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಕಂದಾಯ ಇಲಾಖೆ ಒತ್ತುವರಿದಾರರು ಎಂದು ನೋಟಿಸ್ ನೀಡಿದೆ. ಸಮಗ್ರ ಹಾಗೂ ಸೂಕ್ತ ಸಮೀಕ್ಷೆ ನಡೆಸುವ ಮೊದಲು ಮನೆಗಳಿಗೆ ನೋಟಿಸ್ ನೀಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಬಗ್ಗೆ ನಿವಾಸಿಗಳು ಸ್ಪಷ್ಟ ಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಮೊದಲು ವೈಜ್ಞಾನಿಕ ಹಾಗೂ ನಿಖರ ಸಮೀಕ್ಷೆ ನಡೆಸಿ ವಾಸ್ತವಾಂಶವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮರು ಸರ್ವೇ ಮತ್ತು ಮನೆಗಳ ಸಮೀಕ್ಷೆ ಪೂರ್ಣಗೊಳ್ಳುವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. 70ವರ್ಷಗಳಿಂದಲೂ ಕಂದಾಯ ಇಲಾಖೆ ನೀಡಿರುವ ನೋಟಿಸ್ ಮತ್ತು ವಾಸ್ತವ ಸ್ಥಿತಿಯನ್ನು ಸ್ಥಳೀಯ ನಿವಾಸಿಗಳು ಶಾಸಕ ರೆಡ್ಡಿ ಗಮನಕ್ಕೆ ತಂದರು.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಮನೋಹರಗೌಡ ಹೇರೂರು, ವೀರೇಶ ಬಲ್ಕುಂದಿ, ವೀರೇಶ ಸುಳೇಕಲ್, ಪಾಂಡು ನಾಯ್ಕ, ವೆಂಕಟೇಶ ಜಾಧವ್ ಇತರರಿದ್ದರು.